ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಅಗತ್ಯ ವಸ್ತುಗಳ ಬೆಲೆ ಏರಿಸಿ ಜನವಿರೋಧಿ ನೀತಿ ಅನುಸರಿಸುತ್ತಿರುವ ಕೋಮುವಾದಿ ಬಿಜೆಪಿ ವಿರುದ್ದ 2024 ರ ಲೋಕಸಭೆ ಚುನಾವಣೆಗೆ ಸಿದ್ದರಿದ್ದು, ಯುಪಿಎ ಅಧಿಕಾರಕ್ಕೆ ಬರುವುದು ಖಚಿತ ಎಂದು ಲೋಕಸಭೆ ಸದಸ್ಯ ಕಾಂಗ್ರೆಸ್‍ನ ಲೋಕಸಭೆ ಮುಖ್ಯ ಸಚೇತಕ ಕೊಡಿಕುನ್ನಿಲ್ ಸುರೇಶ್ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಯುವ ನೇತಾರ ರಾಹುಲ್‍ಗಾಂಧಿರವರ ಭಾರತ್ ಜೋಡೋ ಯಾತ್ರೆಯಿಂದ ಪಕ್ಷಕ್ಕೆ ಶಕ್ತಿ ಹುರುಪು ತುಂಬಿದಂತಾಗಿದೆ. ವಿರೋಧಿಗಳು ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ ಯಾತ್ರೆಯೆಂದು ಟೀಕಿಸಿದ್ದಕ್ಕೆ ನಮ್ಮ ನಾಯಕರುಗಳು ಉತ್ತರ ಕೊಟ್ಟಿದ್ದಾರೆ.
ರಾಹುಲ್‍ಗಾಂಧಿ ಯಾತ್ರೆಯುದ್ದಕ್ಕೂ ಗ್ರಾಮೀಣ ಬಡವರ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಮುಂದೆ ಪಕ್ಷ ಅಧಿಕಾರಕ್ಕೆ ಬಂದಾಗ ಏನೆಲ್ಲಾ ಯೋಜನೆಗಳನ್ನು ನೀಡಬಹುದೆನ್ನುವುದನ್ನು ಅರಿತುಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಪಕ್ಷದ ನಾಯಕರುಗಳು ಸಜ್ಜಾಗಿದ್ದು, ಎಲ್ಲೆಡೆ ಮತದಾರರು ಒಲವು ತೋರುತ್ತಿದ್ದಾರೆಂದರು.
ಎಂ.ಎ.ಸೇತೂರಾಂ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಎ.ಐ.ಸಿ.ಸಿ. ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ ಮಮತ ನೇರ್ಲಗಿ, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಸುಬ್ಬಯ್ಯ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…