ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ತಮ್ಮ ಬಜೆಟ್ ನಲ್ಲಿ ಸುಮಾರು 5,300 ಕೋಟಿ ರೂಪಾಯಿ ಅನುದಾನವನ್ನ ಘೋಷಣೆ ಮಾಡಿತ್ತು. ಅದು 2022ರಲ್ಲಿ. ಆದರೆ ಇಲ್ಲಿಯವರೆಗೂ ಅದು ಘೋಷಣೆಯಾಗಿಯೇ ಉಳಿದಿದೆ ವಿನಃ ಭದ್ರಾ ಮೇಲ್ದಂಡೆ ಯೋಜನೆಗಾಗಿ ಹಣ ಬಂದಿಲ್ಲ. ಈ ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ತುಮಕೂರು ಭಾಗದ ರೈತರ ಆಶಾ ಕಿರಣವಾಗಿದೆ. ಹೀಗಾಗಿ ಯೋಜನೆಗೆ ಬರಬೆರಕಾದ ಹಣ ನೀಡದ ಕೇಂದ್ರ ಸರ್ಕಾರದ ವಿರುದ್ಧ ರೈತರು ಗರಂ ಆಗಿದ್ದಾರೆ.
ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೂ ಮುನ್ನ ತರಳಬಾಳು ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ರೈತರು ಭೇಟಿಯಾಗಿದ್ದಾರೆ. ನಮಗೆ, ನಮ್ಮ ಹೋರಾಟಕ್ಕೆ ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಏನು ಘೋಷಣೆ ಮಾಡಿದೆ, ಆ ಹಣವನ್ನ ಬಿಡುಗಡೆ ಮಾಡಿದರೆ ಕೆಲಸವೂ ಚುರುಕುಗೊಳ್ಳಲಿದೆ. ಹಾಗಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡುತ್ತೇವೆ. ಈಗಾಗಲೇ ಸಂಸದ ಗೋವಿಂದ ಕಾರಜೋಳ ಅವರಿಗೂ ಮನವಿಯನ್ನ ಮಾಡಿದ್ದೇವೆ. ಅವರು ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು, ಮಧ್ಯ ಕರ್ನಾಟಕ ಭಾಗದಲ್ಲಿ ಹಲವು ಏತ ನೀರಾವರಿಗಳನ್ನ ಯಶಸ್ವಿಗೊಳಿಸಿದ್ದಾರೆ. ಹೀಗಾಗಿ ಅವರು ರೈತರ ಪಾಲಿನ ಆಶಾ ಕಿರಣವಾಗಿದ್ದಾರೆ. ಹಾಗೆ ಸ್ವಾಮೀಜಿಗಳ ಬೆಂಬಲವೂ ಸಿಗಬೇಕು ಎಂದು ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್ ಆರ್ ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್