ಚಿತ್ರದುರ್ಗ, (ಫೆಬ್ರವರಿ. 21): ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಿಸಲು ಹೊಸದುರ್ಗ ತಾಲ್ಲೂಕು ಮಾಡದಕೆರೆ ಹೋಬಳಿ ದೊಡ್ಡಕಿಟ್ಟದಹಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‍ಗಳಲ್ಲಿ 6 ಎಕೆರೆ 15 ಗುಂಟೆ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಲು ರಚಿಸಿರುವ ಆರ್ ಮತ್ತು ಆರ್ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಫೆ.22ರಂದು ಮಧ್ಯಾಹ್ನ 12.30ಕ್ಕೆ ಹೊಸದುರ್ಗ ತಾಲ್ಲೂಕು ಮಾಡದಕೆರೆ ಹೋಬಳಿ ದೊಡ್ಡಕಿಟ್ಟದಹಳ್ಳಿ ಗ್ರಾಮ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ಸಭೆಗೆ ಸಂಸದರು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ, ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಗಳು, ಇಂಜಿನಿಯರ್‍ಗಳು ಹಾಗೂ ಗ್ರಾಮದ ರೈತರು ಭಾಗವಹಿಸಲಿದ್ದಾರೆ ಎಂದು ಹಿರಿಯೂರು ಕ್ಯಾಂಪ್ ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಪಾಕ ಇಂಜಿನಿಯರ್ ತಿಳಿಸಿದ್ದಾರೆ.


