Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕಾಂಗ್ರೆಸ್‌ನಲ್ಲಿ ಗದ್ದಲ: ಸ್ಥಳೀಯ ಮೂವರು ಮುಖಂಡರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್!

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಚಿತ್ರದುರ್ಗ ಜಿಲ್ಲೆಯಲ್ಲಿ ಎಐಸಿಸಿ ವತಿಯಿಂದ ನಡೆಯುತ್ತಿದ್ದ ಸಂಘಟನಾ ಸೃಜನ್‌ ಅಭಿಯಾನದ ಸಭೆಗಳಲ್ಲಿ ಶಿಸ್ತುಬದ್ಧವಾಗಿ ನಡೆದುಕೊಳ್ಳದೆ, ಗೊಂದಲ ಹಾಗೂ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಮೂವರು ಸ್ಥಳೀಯ ಕಾಂಗ್ರೆಸ್‌ ನಾಯಕರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

​ಸಭೆಯಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ವೀಕ್ಷಕರಿಗೆ ಸಭೆ ನಡೆಸಲು ಅಡ್ಡಿಪಡಿಸಿ, ಒರಟು ಧಾಟಿಯಲ್ಲಿ ಪ್ರಶ್ನೆ ಮಾಡುವ ಮೂಲಕ ವೀಕ್ಷಕರಿಗೆ ಮುಜುಗರ ಉಂಟುಮಾಡಿದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಗೊಂದಲ ಸೃಷ್ಟಿಸಿದ ಚಿತ್ರದುರ್ಗ DCC ಪ್ರಧಾನ ಕಾರ್ಯದರ್ಶಿ ಬಿ.ಟಿ. ಜಗದೀಶ್, ಚಿತ್ರದುರ್ಗ DCC ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ನಂದಿನಿ ಗೌಡ ಹಾಗೂ ಪ್ರೊಫೆಷನಲ್ ಸೆಲ್‌ ಉಪಾಧ್ಯಕ್ಷ ಗುರುರಾಜ್ ಶೆಟ್ಟಿ ಅವರಿಗೆ ಕೆಪಿಸಿಸಿ ಶೋಕಾಸ್ ನೋಟಿಸ್ ನೀಡಿದೆ.
​ನೋಟಿಸ್ ತಲುಪಿದ ಒಂದು ವಾರದೊಳಗೆ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿಗೆ ಲಿಖಿತ ಸಮಜಾಯಿಷಿ ನೀಡಬೇಕು. ನಿಗದಿತ ಸಮಯದಲ್ಲಿ ಸೂಕ್ತ ವಿವರಣೆ ಬರದಿದ್ದರೆ ಪಕ್ಷವು ಮುಂದಿನ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now