Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಸೆಪ್ಟೆಂಬರ್ 24 ಮತ್ತು 25ರಂದು ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ಇದೇ ಸೆಪ್ಟೆಂಬರ್ 24 ಮತ್ತು 25ರಂದು ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ ಪ್ರಸಿದ್ಧ ಬ್ರ್ಯಾಂಡ್‌ಗಳ ವಸ್ತುಗಳು ಇಲ್ಲಿ ದೊರೆಯಲಿವೆ. ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದು ತರಲಾದ ಬನಾರಸ್ ರೇಷ್ಮೆ ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ವಿನ್ಯಾಸಕರ ಫ್ಯಾನ್ಸಿ ಸೀರೆಗಳು ರೂ. 1,100ರಿಂದ 28 ಸಾವಿರ ರೂ.ವರೆಗಿನ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ. ಹಾಗೂ ರೇಷ್ಮೆ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ದಗೊಂಡ ಆಭರಣಗಳು, ಬೆಂಗಳೂರಿನ ವಿನ್ಯಾಸಕರ ಕುರ್ತಿಗಳು, ಕಾಟನ್ ಸೂಪರ್ ಗಾತ್ರದ ಬೆಡ್‌ಶೀಟ್‌ಗಳು, ವಿನ್ಯಾಸಕರ ಕೈಚೀಲಗಳು, ಸೌಂದರ್ಯ ವರ್ಧಕ ಸಾಧನೆಗಳು, ಪ್ರಸಿದ್ಧ ಮಕ್ಕಳ ಉಡುಪುಗಳು ಸಹ ಇಲ್ಲಿ ದೊರೆಯುತ್ತವೆ.

ಕೇವಲ ಎರಡು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುವುದರಿಂದ ಈ ಸುವರ್ಣಾವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆಯ ಸ್ಥಾಪಕಿ ನಿರಂಜನಿ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now