Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಕ್ಷೇಪಾರ್ಹ ಪದ ಬಳಕೆ : ಚಿತ್ರದುರ್ಗದಲ್ಲಿ ಸಿ.ಟಿ ರವಿ ವಿರುದ್ಧ ದೂರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನ. 04 :ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ.ಕುಮಾರ್ ನೇತೃತ್ವದಲ್ಲಿ ಚಿತ್ರದುರ್ಗ ನಗರಠಾಣೆಯಲ್ಲಿ ದೂರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎನ್.ಡಿ,ಕುಮಾರ್ ವಿಧಾನ ಪರಿಷತ್ ಸಿ.ಟಿ.ರವಿ ಅವರು ಕಾರ್ಯ ನಿಮಿತ್ತ ಅ. 27ರಂದು ಚಿಕ್ಕಮಗಳೂರು ಗ್ರಾಮಾಂತರದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ್ದು, ಅಲ್ಲಿನ ಅಧಿಕಾರಿಗಳನ್ನು ವಿಚಾರಿಸುವ ಮೊಬೈಲ್‍ನಲ್ಲಿ ಮಾತನಾಡುವ ಸಂದರ್ಭದಲ್ಲಿ ಸವಿತ ಸಮಾಜದ ನಿಷೇಧಿತ ಪದ(ಹಜಾಮ)ವನ್ನು ಬಳಸಿದ್ದಾರೆ. ಈ ರೀತಿ ಅಸಂವಿಧಾನಿಕ ಪದಗಳನ್ನು ಬಳಸಿ ನಮ್ಮ ಜಾತಿಯ ವೃತ್ತಿ ಧರ್ಮಕ್ಕೆ ಅವಮಾನ ಮಾಡಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುತ್ತಾರೆ ಇದರಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜಕ್ಕೆ ತೀವ್ರ ನೋವುಂಟಾಗಿದೆ ಆದ್ದರಿಂದ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಕಾನೂನಿನಡಿ ಅವರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಈ ಸಮಯದಲ್ಲಿ ಗ್ಯಾರೆಂಟಿ ಜಿಲ್ಲಾಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಆರ್.ಶ್ರೀನಿವಾಸ್, ಅನಿಲ್ ಕುಮಾರ್, ಪರಮೇಶ್ವರಪ್ಪ, ಡಿ.ಎನ್.ಮೈಲಾರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...