ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

1 Min Read

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ 1,31,776 ರೈತರಿಗೆ ಮೊದಲನೇ ಕಂತಾಗಿ ಗರಿಷ್ಠ ರೂ.2000 ರವರೆಗೆ ಒಟ್ಟು ರೂ.25,61,56,790/-ಗಳನ್ನು ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ.
ಪ್ರಸ್ತುತ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಅರ್ಹತೆಯ ಅನುಸಾರ ಅರ್ಹ ರೈತರಿಗೆ ಗರಿಷ್ಠ ರೂ.2000 ರವರೆಗೆ ಪರಿಹಾರ ಮೊತ್ತ ಪಾವತಿಸಿರುವುದನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ (ಇನ್‍ಪುಟ್ ಸಬ್ಸಿಡಿ) ಮೊತ್ತವನ್ನು ವಿತರಿಸಲಾಗುವುದು. ಅದರಂತೆ ಜಿಲ್ಲೆಯ 1,17,064 ರೈತರಿಗೆ ಒಟ್ಟು ರೂ.89,31,60,013/- ಗಳನ್ನು ಡಿಬಿಟಿ ಮುಖಾಂತರ ಪಾವತಿಸಲಾಗುತ್ತಿದೆ.

ಪರಿಹಾರ ಹಣ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08194-222538,

ಉಪ ವಿಭಾಗಾಧಿಕಾರಿಗಳ ಕಚೇರಿ 08194-222413 ಹಾಗೂ ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416,

ಚಳ್ಳಕೆರೆ 08195-250648,
ಹಿರಿಯೂರು 08193-263226
ಹೊಸದುರ್ಗ 08199-295058,
ಹೊಳಲ್ಕೆರೆ 08191-200013,
ಮೊಳಕಾಲ್ಮೂರು ತಾಲ್ಲೂಕು ಕಚೇರಿ 08198-229234 ಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
Leave a Comment

Leave a Reply

Your email address will not be published. Required fields are marked *