ಚಿತ್ರದುರ್ಗ. ಮೇ.08: ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ 1,31,776 ರೈತರಿಗೆ ಮೊದಲನೇ ಕಂತಾಗಿ ಗರಿಷ್ಠ ರೂ.2000 ರವರೆಗೆ ಒಟ್ಟು ರೂ.25,61,56,790/-ಗಳನ್ನು ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ.
ಪ್ರಸ್ತುತ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಅರ್ಹತೆಯ ಅನುಸಾರ ಅರ್ಹ ರೈತರಿಗೆ ಗರಿಷ್ಠ ರೂ.2000 ರವರೆಗೆ ಪರಿಹಾರ ಮೊತ್ತ ಪಾವತಿಸಿರುವುದನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ (ಇನ್‍ಪುಟ್ ಸಬ್ಸಿಡಿ) ಮೊತ್ತವನ್ನು ವಿತರಿಸಲಾಗುವುದು. ಅದರಂತೆ ಜಿಲ್ಲೆಯ 1,17,064 ರೈತರಿಗೆ ಒಟ್ಟು ರೂ.89,31,60,013/- ಗಳನ್ನು ಡಿಬಿಟಿ ಮುಖಾಂತರ ಪಾವತಿಸಲಾಗುತ್ತಿದೆ.
ಪರಿಹಾರ ಹಣ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08194-222538,
ಉಪ ವಿಭಾಗಾಧಿಕಾರಿಗಳ ಕಚೇರಿ 08194-222413 ಹಾಗೂ ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416,
ಚಳ್ಳಕೆರೆ 08195-250648,
ಹಿರಿಯೂರು 08193-263226
ಹೊಸದುರ್ಗ 08199-295058,
ಹೊಳಲ್ಕೆರೆ 08191-200013,
ಮೊಳಕಾಲ್ಮೂರು ತಾಲ್ಲೂಕು ಕಚೇರಿ 08198-229234 ಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…