ಸುದ್ದಿಒನ್,ಬೆಂಗಳೂರು,ಜೂನ್.03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ವಿಶೇಷವಾಗಿ ಶುಭ ಕೋರಿದ ಹೆಚ್.ಡಿ.ಕುಮಾರಸ್ವಾಮಿ,ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.
ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ.@DKShivakumar
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 3, 2026

ಕರ್ನಾಟಕ ರಾಜಕಾರಣದಲ್ಲಿ ಇಂದು ಹೊಸದೊಂದು ಐತಿಹಾಸಿಕ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.















