ಬೆಂಗಳೂರು; ನೆಲಮಂಗಲ ತಾಲೂಕಿನ ಹಳೆ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ, ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ. ಅನಂತ್ ಕುಮಾರ್ ಹೆಗ್ಡೆ ಪುತ್ರ ಅಶುತೋಶ್, ಗನ್ ಮ್ಯಾನ್ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ದೂರು ದಾಖಲಾಗಿದೆ. ಘಟನೆ ವೇಳೆ ಅನಂತ್ ಕುಮಾರ್ ಹೆಗ್ಡೆ ಅವರು ಕೂಡ ಕಾರಿನಲ್ಲಿದ್ದ ಕಾರಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನ ಓವರ್ ಟೇಕ್ ಮಾಡಿದ್ದಕ್ಕೆ ಅವರ ಪುತ್ರ ಅಶುತೋಷ್ ಹಾಗೂ ಚಾಲಕ, ಗನ್ ಮ್ಯಾನ್ ಸೇರಿ ಆ ಇನ್ನೋವಾ ಕಾರಿನಲ್ಲಿದ್ದ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಅವರಿಗೆ ದಾಬಸ್ ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ವಿಚಾರಣೆ ಎ ಅನಂತ್ ಕುಮಾರ್ ಹೆಗ್ಡೆ ಅವರು, ಕಾರಿಗೆ ಸಣ್ಣದಾಗಿ ಟಚ್ ಆಗಿದ್ದಕ್ಕೆ ಗಲಾಟೆ ನಡೆದಿದೆ. ಹಲ್ಲೆ ನಾನು ಮಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.
ಘಟನೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಈ ಸಂಬಂಧ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಸಣ್ಣ ಮಟ್ಟಿನ ಕಾರು ಅಪಘಾತದಿಂದ ಈ ಗಲಾಟೆ ನಡೆದಿದೆ. ಹಲ್ಲೆಗೊಳಗಾದವರ ಬಳಿ ಮಾತುಕತೆ ನಡೆಸಿದ್ದೇನೆ. ಮುಸ್ಲಿಂ ಮುಖಂಡರ ಬಳಿಯೂ ಮಾತುಕತೆ ನಡೆಸಿದ್ದೇನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















