ಸುದ್ದಿಒನ್ : ಉತ್ತರ ಪ್ರದೇಶದಲ್ಲಿ ಯಾರು ಗೆದ್ದರೆ ಅವರಿಗೆ ದೆಹಲಿ ಗದ್ದುಗೆ ಎಂಬ ಮಾತಿದೆ. ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸ್ಥಾನಗಳಿವೆ. ಆ ರಾಜ್ಯದ ಸ್ಥಾನಗಳು ಸಾರ್ವತ್ರಿಕ ಚುನಾವಣೆಯಲ್ಲಿ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುತ್ತವೆ.
2014 ಮತ್ತು 2019 ರ ಚುನಾವಣೆಗಳಲ್ಲಿ, ಬಿಜೆಪಿ ಅಲ್ಲಿ ಭಾರಿ ಸಂಖ್ಯೆಯ ಸ್ಥಾನಗಳನ್ನು ಗೆದ್ದು ತನ್ನದೇ ಆದ ಸರ್ಕಾರವನ್ನು ರಚಿಸಿತ್ತು. ಆದರೆ, ಈ ಬಾರಿ ಅಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಅಲ್ಲಿ ಇಂಡಿಯಾ ಮೈತ್ರಿಕೂಟ ಅಸಾಧಾರಣವಾದ ಮೇಲುಗೈ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಮಿತ್ರಪಕ್ಷಗಳೊಂದಿಗೆ 65 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಅರ್ಧದಷ್ಟು ಸ್ಥಾನ ಕಳೆದುಕೊಂಡಿದೆ. ಅಖಿಲೇಶ್ ನೇತೃತ್ವದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿ ಉತ್ತಮ ಫಲಿತಾಂಶ ಪಡೆದಿವೆ. ಕಳೆದ ಚುನಾವಣೆಯಲ್ಲಿ ಸೋತಿದ್ದ ಅಮೇಥಿಯನ್ನು ಕಾಂಗ್ರೆಸ್ ಮತ್ತೆ ವಶಪಡಿಸಿಕೊಂಡಿದೆ.
ಅಲ್ಲದೆ, ಆ ಪಕ್ಷಕ್ಕೆ ಭದ್ರಕೋಟೆಯಾಗಿದ್ದ ಮತ್ತೊಂದು ಲೋಕಸಭಾ ಸ್ಥಾನ, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ಆದ್ದರಿಂದ ಈ ಬಾರಿ ರಾಹುಲ್ ಗಾಂಧಿ ಅಲ್ಲಿಂದ ಸ್ಪರ್ಧಿಸಿದ್ದರು.
ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಠಿಯಿಂದ ಕಿಶೋರಿಲಾಲ್ ಶರ್ಮಾ ಅವರು ಈ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…