
ಲಕ್ನೋ: ದೇಶದಲ್ಲಿ ಇದೀಗ ತಾನೇ ಕರೋನಾ ಪ್ರಕರಣಗಳು ಇಳಿಮುಖವಾಗುತ್ತಿವೆ. ಆದರೆ ಉತ್ತರ ಪ್ರದೇಶದಲ್ಲಿ ವೈರಲ್ ಫೀವರ್ ನಿಂದಾಗಿ ಅಲ್ಲಿನ ಜನರು ಕಂಗಾಲಾಗಿದ್ದಾರೆ.

ಫಿರೋಜಾಬಾದ್‌ನಲ್ಲಿ ಇದುವರೆಗೆ 50 ಮಕ್ಕಳು ವೈರಲ್ ಫೀವರ್ ನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಈ ಘಟನೆಯನ್ನು ಸಿಎಂ ಯೋಗಿ ಗಂಭೀರವಾಗಿ ಪರಿಗಣಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಒದಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ಫಿರೋಜಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿಯನ್ನು (CMO) ವಜಾ ಮಾಡಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಈ ಆದೇಶದಿಂದ ಎಚ್ಚೆತ್ತ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಮತ್ತು ಪ್ಲೇಟ್ ಲೆಟ್ ಗಳ ಕೊರತೆಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ (ಆಗಸ್ಟ್ 30) ಸಿಎಂ ಯೋಗಿ ಅವರು ಫಿರೋಜಾಬಾದ್ ಸರ್ಕಾರಿ ಆಸ್ಪತ್ರೆಗೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಈ ಜ್ವರದ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೆಪ್ಟೆಂಬರ್ 7 ರಿಂದ 16 ರವರೆಗೆ ಪ್ರತಿ ಮನೆಗೆ ಹೋಗಲು ಆದೇಶಿಸಲಾಗಿದೆ.
ಜ್ವರದಿಂದ ಬಳಲುತ್ತಿರುವವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಬೇಕು. ಗ್ರಾಮಗಳಲ್ಲಿ ಮತ್ತು ಪಟ್ಟಣಗಳಲ್ಲಿನ ನೈರ್ಮಲ್ಯ ಅಧಿಕಾರಿಗಳಿಗೆ ಸ್ಥಳೀಯವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯೋಗಿ ಸೂಚಿಸಿದರು. ವೈದ್ಯಕೀಯ ಅಧಿಕಾರಿಗಳು ಈ ವೈರಸ್ ಅನ್ನು ಡೆಂಗ್ಯೂ ಎಂದು ಭಾವಿಸಿದ್ದರೂ, ಅದು ಅಸ್ಪಷ್ಟವಾಗಿದೆ.
GIPHY App Key not set. Please check settings