ಸುದ್ದಿಒನ್, ಚಿತ್ರದುರ್ಗ, ಮಾರ್ಚ್.19 : ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಹಾಗೂ ಕರ್ನಾಟಕ ಸರ್ಕಾರದ ಕುವೆಂಪು ಭಾಷಾ ಪ್ರಾಧಿಕಾರದ ಸದಸ್ಯರಾಗಿ ಆಯ್ಕೆಯಾದ ಕರಿಯಪ್ಪ ಮಾಳಿಗೆ ಮತ್ತು ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ದಾವಣಗೆರೆಯ ವೈ ಕುಮಾರ ಅವರು ಚಿತ್ರದುರ್ಗ ಭೋವಿಗುರುಪೀಠಕ್ಕೆ ಭೇಟಿ ನೀಡಿದರು.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕೊರಟಗೆರೆಯ ಶ್ರೀ ಕಾಶಿ ಅನ್ನಪೂರ್ಣೇಶ್ವರಿ ಮಠದ ಶ್ರೀ ಮಹಾಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಶ್ರೀ ಅನಿತ್ ಸಿದ್ದೇಶ್ವರ, ಶ್ರೀಮತಿ ಅಶ್ವಿನಿ ಶ್ರೀನಿವಾಸ, ತುಮಕೂರು ಭಾಜಪ ಜಿಲ್ಲಾಧ್ಯಕ್ಷ ಹನುಮಂತೇಗೌಡ, ತುಮಕೂರು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಓಂಕಾರ ಚಿತ್ರದುರ್ಗ ಭಾಜಪ ಮುಖಂಡ ಚಂದ್ರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














