ಬೆಂಗಳೂರು: ಬಿಜೆಪಿಯಲ್ಲಿ ವಿ ಸೋಮಣ್ಣ ಅವರ ಅಸಮಾಧಾನ ಬೂದಿ ಮುಚ್ಚಿದ ಕೆಂಡದಂತೆ ಆಡುತ್ತಿದೆ. ಇದೀಗ ಇದ್ದಕ್ಕಿದ್ದ ಹಾಗೇ ಆ ಬೂದಿ ಸರಿದು ಮತ್ತೆ ಕೆಂಡ ಕೆಣಕುತ್ತಿದೆ. ಸೋಲಿಗೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಲೇಬೇಕೆಂದು ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ವಿ ಸೋಮಣ್ಣ ಮಾತನಾಡಿದ್ದು, ನನ್ನ ಸೋಲಿಗೆ ಯಾರು ಯಾರು ಕಾರಣ ಎಂಬುದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಾನು ಸಿಡಿದೇಳಬೇಕಾಗುತ್ತದೆ. ಸರಿಪಡಿಸುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಎಚ್ಚರಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರ ಇರುವ ಕಾರಣ ನಾನು ಏನನ್ನು ಮಾತನಾಡುವುದಕ್ಕೆ ಹೋಗುವುದಿಲ್ಲ. ಆದರೆ ನಮ್ಮಂತವರಿಗೆ ಏನೇನು ಅನಾನುಕೂಲವಾಗುತ್ತಿದೆ ಎಂಬುದು ತಿಳಿದಿದೆ. ಅವರಿಗೇನೆ ಅಂಟಿಕೊಂಡು ಹೋಗುತ್ತೇನೆ ಎಂದರೆ ನಾನು ಬೇರೆ ಮಾತನಾಡಬೇಕಾಗುತ್ತದೆ. ರಾಜ್ಯ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಇನ್ನು ಯುವಕ. ನೀನು ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದ್ದಾರೆ.
ಇನ್ನು ವಿ ಸೋಮಣ್ಣ ಅವರು ಈ ರೀತಿ ಮಾತನಾಡಿದ್ದನ್ನು ನೋಡಿದ ಬಿಜೆಪಿ ನಾಯಕರು, ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಅವರ ಬಳಿ ನಾವೂ ಮಾತನಾಡುತ್ತೇವೆ, ಅವರನ್ನು ಬಿಜೆಪಿಯಲ್ಲಿಯೇ ಇಟ್ಟುಕೊಳ್ಳುತ್ತೇವೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















