ವಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕನಾ..?

suddionenews
1 Min Read

ಬೆಂಗಳೂರು: ವಿ ಸೋಮಣ್ಣ ಅವರಗೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿರುವುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಬಿಜೆಪಿ ನಾಯಕರು ಸಮಾಧಾನ ಮಾಡುವುದಕ್ಕೂ ಪ್ರಯತ್ನ ಮಾಡಿದ್ದಾರೆ. ಆದರೆ ಆ ಅಸಮಾಧಾನ ಸರಿ ಆಗಿಲ್ಲ ಎಂದೇ ಕಾಣುತ್ತಿದೆ. ಇದೀಗ ಹೊಸದೊಂದು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಡಿಸೆಂಬರ್ 6ರಂದು ಬಿಡಿಬಿಡಿಯಾಗಿ ಹೇಳುತ್ತೇನೆ ಎಂದಿದ್ದಾರೆ.

ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆಗೆ ಇಳಿಯುತ್ತಾರೆ ಎಂಬ ಮಾತು ಕೂಡ ಇದೆ. ಇತ್ತಿಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕಾ ಎನ್ನಲಾಗಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತ ಮಾತುಗಳನ್ನ ಆಡಿದ್ದಾರೆ.

ಇಂದು ಮಾತನಾಡಿರುವ ವಿ ಸೋಮಣ್ಣ, ಡಿಸೆಂಬರ್ 6 ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಅಂದು ಎಲ್ಲವನ್ನು ಬಿಡಿ ಬಿಡಿಯಾಗಿ ವಿವರಿಸುತ್ತೇನೆ. ನನ್ನ ಯಾರು ಸಂಪರ್ಕಿಸಿಲ್ಲ, ನಾನು ಯಾರನ್ನು ಸಂಪರ್ಕಿಸಿಲ್ಲ. ಪಕ್ಷದಲ್ಲಿ ಒಂದು ರೀತಿಯಲ್ಲಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಅರವಿಂದ ಲಿಂಬಾವಳಿ ಹೇಳಿದ ಮಾತಿಗೆ ನನ್ನ ಪೂರ್ಣ ಸಮ್ಮತಿ ಇದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks