ಚಿತ್ರದುರ್ಗ,(ಏ.06) : ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ತಿರಸ್ಕøತ ಅಭ್ಯರ್ಥಿಗಳ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಪಟ್ಟಿಗಳನ್ನು ಹಾಗೂ ಆಕ್ಷೇಪಣೆ ಸಲ್ಲಿಸಲು ನಿಗಧಿತ ನಮೂನೆಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತವೆಬ್‍ಸೈಟ್ https://chitradurga.nic.in/en/notice_category/recruitment ನಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಬಾಧಿತರಾದ ಅಭ್ಯರ್ಥಿಗಳು ಏಪ್ರಿಲ್ 20ರೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ಅಧಿಸೂಚನೆಯೊಂದಿಗೆ ಲಗತ್ತಿಸಿದ ನಿಗಧಿತ ನಮೂನೆಯಲ್ಲಿ ತಮ್ಮ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಮುದ್ದಾಂ, ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಸೂಚಿಸಿದೆ.
ತಪ್ಪಿದಲ್ಲಿ, ಅಭ್ಯರ್ಥಿಗಳ ಆಕ್ಷೇಪಣೆಗಳು ಏನೂ ಇರುವುದಿಲ್ಲವೆಂದು ಭಾವಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನೇ ಅಂತಿಮಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.