Connect with us

Hi, what are you looking for?

ಪ್ರಮುಖ ಸುದ್ದಿ

ಉದ್ಯೋಗಸ್ಥರು ಇರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ವೀಡಿಯೋ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಉದ್ಯೋಗಸ್ಥರಿಗೆ, ಅರ್ಹರಿಗೆ ಅದೇ ಸ್ಥಳಗಳಲ್ಲಿ ಹೋಗಿ ಲಸಿಕೆ ನೀಡುವ ಅವಕಾಶ ಕೊಟ್ಟಿದೆ. ಈ ಕುರಿತು ದೊಡ್ಡ ಉದ್ಯಮಗಳು, ಐಟಿ ಉದ್ಯಮಗಳು ಮನವಿ ಮಾಡಿದ್ದವು. ಅದಕ್ಕೆ ಕೇಂದ್ರದಿಂದ ಮಂಜೂರಾತಿ ಸಿಕ್ಕಿದೆ. ಏಪ್ರಿಲ್ 11ರಿಂದ ಅವರಿರುವ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆಯಾಗಲಿದೆ. ಇದರಿಂದಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಲಿದೆ. ಈವರೆಗೆ 50 ಲಕ್ಷ ಡೋಸ್ ತಲುಪಲಾಗಿದೆ. ಆದಷ್ಟು ಶೀಘ್ರ ಇನ್ನಷ್ಟು 50 ಲಕ್ಷವಾಗಿ, ಒಂದು ಕೋಟಿ ತಲುಪಲಿದೆ ಎಂದರು.

ಕಳೆದೆರಡು ವಾರ ಗಮನಿಸಿದಾಗ ಕೆಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಾ ಹೋಗಿದೆ. ಕೆಲವು ಕಡೆ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ. ಸಾರಿ ಹಾಗೂ ಐಎಲ್ ಐ ಪ್ರಕರಣ ಪತ್ತೆ ಕಡಿಮೆ ಹಾಗೂ ಲಸಿಕೆ ಮೊದಲಾದ ವಿಷಯ ಕುರಿತು ಚರ್ಚಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ನೀಡಿದ ಮಾರ್ಗದರ್ಶನವನ್ನು ಈ ಜಿಲ್ಲೆಗಳಿಗೆ ತಿಳಿಸಲಾಗಿದೆ. ಎಲ್ಲರೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರು ಸ್ವಯಂ ನಿಯಮ ಹಾಕಿಕೊಳ್ಳಬೇಕು ಎಂದರು.

ಜನರು ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಸಹಕಾರ ನೀಡಬೇಕು. ಎರಡನೇ ಅಲೆ ನಿರೀಕ್ಷೆಗೆ ಮೀರಿ ಹರಡುತ್ತಿದೆ. ಸೋಂಕು ಹೆಚ್ಚಾದರೆ ಹಾಸಿಗೆ ಲಭ್ಯತೆ ಕಷ್ಟವಾಗುತ್ತದೆ. ಕಳೆದೊಂದು ವರ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಅಂತಹ ಸಮಸ್ಯೆ ಇಲ್ಲ. ಆದರೆ ಇದೇ ರೀತಿ 6%, 9% ಪಾಸಿಟಿವಿಟಿ ದರ ಬಂದರೆ ಅಥವಾ 20%, 25% ಬಂದರೆ ಎಷ್ಟು ಜನ ಐಸಿಯುಗೆ ಹೋಗಬೇಕಾಗುತ್ತದೆ ಎಂದು ಯೋಚಿಸಬೇಕಾಗುತ್ತದೆ. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚಿಸಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!