ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 24 : ದೂರ ಪ್ರಯಾಣ ಮಾಡುವವರಿಗೆ ಯಾವುದೇ ರೀತಿಯ ಸೋಂಕು ಹರಡದಂತೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ತಿಳಿಸಿದರು.
ಹಜ್ ಯಾತ್ರಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವು ಕೂಡ ಎಂ.ಕೆ.ಪ್ಯಾಲೇಸ್‍ನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಲಸಿಕೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
102 ಹಜ್ ಯಾತ್ರಾರ್ಥಿಗಳಿಗೆ ಪೋಲಿಯೋ ಮಾದರಿ ಹನಿ ಹಾಗೂ ಲಸಿಕೆ ನೀಡುವುದರಿಂದ ಆರೋಗ್ಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಭಾರತ ಸರ್ಕಾರ ಔಷಧಿಗಳನ್ನು ಪೂರೈಸುತ್ತಿದೆ. ಗರ್ಭಕಂಠದ ಕ್ಯಾನ್ಸ್‍ರ್ ತಡೆಗಟ್ಟುವುದಕ್ಕಾಗಿ ಮುಂಜಾಗ್ರತೆಯಾಗಿ ಹದಿನಾಲ್ಕು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ. ಲಸಿಕೆ ಕೊಡಲಾಗುತ್ತಿದೆ. ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯವಿದ್ದು, ಹೆಣ್ಣು ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಮಾತನಾಡಿ ಹೆಚ್.ಪಿ.ವಿ. ಲಸಿಕೆ ತೆಗೆದುಕೊಂಡರೆ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿದೆ ಎಂಬುದಾಗಿ ಕೆಲವರು ತಪ್ಪು ಕಲ್ಪನೆ ಮೂಡಿಸುತ್ತಿದ್ದಾರೆ. ಯಾರು ಇದಕ್ಕೆ ಕಿವಿಗೊಡುವುದು ಬೇಡ. ಗರ್ಭಕಂಠದ ಕ್ಯಾನ್ಸ್‍ರ್ ಬಾರದಂತೆ ಹದಿನಾಲ್ಕು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರು ಇದಕ್ಕೆ ಕೈಜೋಡಿಸುವಂತೆ ವಿನಂತಿಸಿದರು.
ಆರ್.ಸಿ.ಹೆಚ್.ಅಧಿಕಾರಿ ಡಾ.ಅಭಿನವ್ ಮಾತನಾಡುತ್ತ ಹಜ್ ಯಾತ್ರಾರ್ಥಿಗಳಿಗೆ ಪೋಲಿಯೋ ಮಾದರಿ ಹನಿ, ಮೆದುಳು ಜ್ವರ ಬಾರದಂತೆ, ವಯಸ್ಸಾದವರಿಗೆ ಶ್ವಾಸಕೋಶದ ತೊಂದರೆಯಾಗಬಾರದೆಂದು ಮೂರು ಹಂತದಲ್ಲಿ ಲಸಿಕೆ ನೀಡಲಾಗುವುದು. ಹದಿನಾಲ್ಕು ವರ್ಷದೊಳಗಿನ ಹೆಣ್ಣು ಮಕ್ಕಳು ಗರ್ಭಕಂಠ ಕ್ಯಾನ್ಸ್‍ರ್ ವಿರುದ್ದ ಮುಂಜಾಗ್ರತೆಯಾಗಿ ಹೆಚ್.ಪಿ.ವಿ. ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿ ಹಜ್‍ಯಾತ್ರೆ ಸುಖಕರವಾಗಿರಲೆಂದು ಶುಭ ಹಾರೈಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಧರ್ಮಗುರುಗಳಾದ ಮುಜಾಫರ್ ಶಕೀಲ್, ಬಶೀರ್ ಅಹಮದ್, ಎಜಾಜ್, ಹಜ್ ಕಮಿಟಿ ಕಾರ್ಯದರ್ಶಿ ಹಾಜಿ ಆರ್.ದಾದಾಪೀರ್, ಹಾದಿಲ್, ಸಾಧಿಕ್, ಅಕ್ಬರ್, ಡಾ.ಸುಹೇಲ್, ಜಿಲ್ಲಾ ವಕ್ಪ್ ಅಧಿಕಾರಿ ಅಮ್ಜದ್, ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಆರೋಗ್ಯ ನಿರಿಕ್ಷಣಾಧಿಕಾರಿ ಗಂಗಾಧರ್, ಲಸಿಕಾ ವ್ಯವಸ್ಥಾಪಕ ವೀರೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕೃಷ್ಣನಾಯ್ಕ, ಮೂಗಪ್ಪ, ಕ್ಷಯ ರೋಗ ಮೇಲ್ವಿಚಾರಕರುಗಳಾದ ಮಹೇಂದ್ರ, ಮಾರುತಿ ಇವರುಗಳು ವೇದಿಕೆಯಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್