ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

 

ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು.

ನಗರದ ಸಂತ ಜೋಸೆಫೆರ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮಗುವಿಗೆ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಗುರುತಿಸಲು ಮತ್ತು ಪ್ರಶಂಸಿಸಲು ಭಾರತ ಸರ್ಕಾರವು ಮಾರ್ಚ್ 16 ಅನ್ನು ರಾಷ್ಟ್ರೀಯ ಲಸಿಕೆ ದಿನವನ್ನಾಗಿ ಆಚರಿಸುತ್ತದೆ. ತೀವ್ರವಾದ ವ್ಯಾಕ್ಸಿನೇಷನ್ ಡ್ರೈವ್‍ಗಳ ಮೂಲಕ ದಿನನಿತ್ಯದ ಪ್ರತಿರಕ್ಷಣೆಯನ್ನು ಹೆಚ್ಚಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ದೇಶದಲ್ಲಿ ಮೊದಲ ಲಸಿಕೆ ದಿನಾಚರಣೆಯನ್ನು 1995ರ ಮಾರ್ಚ್ 16ರಂದು ಆಚರಣೆ ಮಾಡಲಾಯಿತು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ ‘ಪಲ್ಸ್  ಪೋಲಿಯೊ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಎರಡು ದಶಕಗಳ ಬಳಿಕ ದೇಶದಲ್ಲಿ ಕ್ರಮೇಣ  ಪೋಲಿಯೊ    ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು  ಪೋಲಿಯೊ   ಮುಕ್ತ ಎಂದು ಘೋಷಿಸಲಾಯಿತು. ಮಕ್ಕಳಿಗೆ  ಪೋಲಿಯೊ    ಹನಿ ಜತೆಗೆ ಮಕ್ಕಳಿಗೆ ದಡಾರ, ಸಿಡುಬು, ಕ್ಷಯಗಳ ಲಸಿಕೆ ಹಾಕಿಸುವುದೂ ಮುಖ್ಯ. ಲಸಿಕೆ ದಿನದಂದು ಈ ಅಂಶಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ. ಸಕಾಲದಲ್ಲಿ ಲಸಿಕೆ ಹಾಕಿಸುವುದರಿಂದ ಪ್ರತಿ ವರ್ಷ ಲಕ್ಷಾಂತರ ಮಕ್ಕಳು ಸಾವಿನಿಂದ ಪಾರಾಗುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೋಷಣ್ ಅಭಿಯಾನ ವ್ಯವಸ್ತಾಪಕ ಕರಕಪ್ಪ ಮೇಟಿ ಮಾತನಾಡಿ, ಬೇಸಿಗೆಯಲ್ಲಿ ಬದುಕುವ ರೀತಿ, ಶಾಖದ ಅಲೆಯಿಂದ ಯಾವರೀತಿ ಸಂರಕ್ಷಣೆ ಮಾಡಿಕೊಳ್ಳುವ ಬಗೆ ತಿಳಿಸಿದರು. ತೆಳು ಕಾಟನ್ ಬಟ್ಟೆಗಳನ್ನು ಧರಿಸಬೇಕು. ಮಸಾಲೆ ಪದಾರ್ಥಗಳನ್ನು ಕರಿದ ತಿಂಡಿಗಳನ್ನು ತಿನ್ನಬಾರದು. ನಿರ್ಜಲೀಕರಣವಾಗದಂತೆ ಹೆಚ್ಚು ಹೆಚ್ಚು ನೀರು ಕುಡಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ್, ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್ , ಶಾಲೆಯ ಮುಖ್ಯ ಶಿಕ್ಷಕಿ ಇರುದ್ಯಾ ರಾಣಿ, ಸಹ ಶಿಕ್ಷಕರಾದ ಸುಶೀಲಾ, ಮೇರಿ, ರೀಟಾ, ದಾಕ್ಷಾಯಣಿ, ವಿಕ್ಟೋರಿಯಾ, ಕೆ.ಎಸ್.ಅಜ್ಜಯ್ಯ, ಶಿವಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ವಿಜಯಾಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ರೇಖಾ, ಆಶಾ ಕಾರ್ಯಕರ್ತೆ ಗೀತಾ ಇದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಹಿಮೋಗ್ಲೋಬಿನ್ ಪರೀಕ್ಷೆ ನಡೆಸಲಾಯಿತು.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

8 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

8 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

9 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

9 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

10 hours ago