Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಪದಚ್ಯುತಿ

---Advertisement---

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಿಂದ ವಚನಾನಂದ ಶ್ರೀ ಅವರನ್ನು ಪದಚ್ಯುತಿ ಮಾಡಲಾಗಿದೆ. ಹರಿಹರ ತಾಲೂಕಿನ ಹನಗವಾಡಿ ಸಮೀಪದ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಮಂದಿ ಧರ್ಮದರ್ಶಿಗಳು ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಪೀಠದ ಟ್ರಸ್ಟಿ ಬಸವರಾಜ ದಿಂಡೂರ ತಿಳಿಸಿದ್ದಾರೆ.

ಟ್ರಸ್ಟಿ ಬಸವರಾಜ ದಿಂಡೂರ ಅವರ ಪ್ರಕಾರ, ವಚನಾನಂದ ಶ್ರೀ ಅವರಿಗೆ ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠ — ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಅವರು ಈ ಸೂಚನೆಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಟ್ರಸ್ಟಿ ಜಿ.ಪಿ. ಪಾಟೀಲ್, ಇದು ವೈಯಕ್ತಿಕ ನಿರ್ಧಾರವಲ್ಲ, ಸಮಾಜದ ಒಟ್ಟಾರೆ ತೀರ್ಮಾನವಾಗಿದೆ ಎಂದು ಸ್ಪಷ್ಟಪಡಿಸಿದರು. ಸ್ವಾಮೀಜಿಗಳು ಧರ್ಮದರ್ಶಿಗಳನ್ನು ಒಳಗೆ ಕರೆಯಲು ಸಿದ್ಧರಾಗಿರಲಿಲ್ಲ ಹಾಗೂ ಶ್ವಾಸಗುರು ಪೀಠವನ್ನು ತ್ಯಜಿಸದಿರುವುದೇ ಪ್ರಮುಖ ಕಾರಣವಾಗಿದೆ. ಇತರ ಕಾರಣಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವರದಿ ಪ್ರಕಟವಾಗುವ ಹೊತ್ತಿಗೆ ವಚನಾನಂದ ಶ್ರೀ ಅವರು ತಮ್ಮ ಮೇಲಿನ ಪದಚ್ಯುತಿ ಕ್ರಮದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಧರ್ಮದರ್ಶಿಗಳ ತೀರ್ಮಾನವನ್ನು ಅವರು ಅಂಗೀಕರಿಸುತ್ತಾರೆಯೋ ಅಥವಾ ತಮ್ಮ ವಾದವನ್ನು ಮುಂದಿಡುತ್ತಾರೆಯೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.ಗಮನಾರ್ಹವಾಗಿ, ಕೆಲ ವಾರಗಳ ಹಿಂದಷ್ಟೇ ಕೂಡಲಸಂಗಮದಲ್ಲಿರುವ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ನ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಇದೀಗ ಹರಿಹರ ಪೀಠದಲ್ಲಿಯೂ ಇಂತಹ ಕ್ರಮ ಜರುಗಿರುವುದು ಭಕ್ತರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...