Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆಯಲ್ಲಿ ವೈದ್ಯೆ ಪೂರ್ಣಿಮರವರ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 08 : ನಗರದ ಸಿ.ಕೆ.ಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬ್ರಷ್, ಪೇಸ್ಟ್ ಮತ್ತು ಟಂಗ್ ಕ್ಲೀನರ್ ಮತ್ತು ಸಿಹಿ ವಿತರಿಸುವ ಮೂಲಕ ದಂತ ವೈದ್ಯೆ ಪೂರ್ಣಿಮರವರು ತಮ್ಮ 50 ನೇ ವರ್ಷದ ಹುಟ್ಟುಹಬ್ಬವನ್ನು ಸೋಮವಾರ ಸರಳವಾಗಿ ಆಚರಿಸಿಕೊಂಡರು.

 

ದಿನಕ್ಕೆ ಕನಿಷ್ಟ ಎರಡು ಬಾರಿ ಹಲ್ಲು ಉಜ್ಜಬೇಕು. ಮೂರು ಬಾರಿಗಿಂತ ಹೆಚ್ಚು ಉಜ್ಜಬಾರದು. ಮೃದುವಾಗಿ ಹಲ್ಲು ಉಜ್ಜಬೇಕು. ಒರಟಾಗಿ ಉಜ್ಜುವುದರಿಂದ ವಸಡಿಗೆ ಹಾನಿಯಾಗುತ್ತದೆ. ಎರಡು ನಿಮಿಷಗಳ ಕಾಲ ಹಲ್ಲು ಉಜ್ಜಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಟೂತ್ ಬ್ರಷ್ ಬದಲಾಯಿಸಬೇಕೆಂದು ಮಕ್ಕಳಿಗೆ ತಿಳಿಸಿದರು.
ಸಿಹಿ ಪದಾರ್ಥವನ್ನು ತಿಂದ ಕೂಡಲೆ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಇಲ್ಲವಾದಲ್ಲಿ ಹಲ್ಲು ಹುಳುಕಾಗುತ್ತದೆ. ಹಾಗಾಗಿ ಹಲ್ಲಿನ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಮಕ್ಕಳಿಗೆ ಡಾ.ಪೂರ್ಣಿಮ ಮನವರಿಕೆ ಮಾಡಿದರು.

 

ಶಾಲೆಯ ಮುಖ್ಯ ಶಿಕ್ಷಕಿ ಪಿ.ಮಂಜುಳ, ಶಿಕ್ಷಕಿಯರುಗಳಾದ ಹೆಚ್.ರತ್ನಮ್ಮ, ಎ.ಮಂಜುಳ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದು, ಡಾ.ಪೂರ್ಣಿಮರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now