ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಇಲ್ಲಿನ ತಿಪ್ಪಜ್ಜಿ ಸರ್ಕಲ್‍ನಲ್ಲಿರುವ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಬೆಳಗಿನಿಂದ ಸಂಜೆಯತನಕ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದರು. ಬಗೆ ಬಗೆಯ ಹೂವು, ಹಾರ ಹಾಗೂ ಹಸಿರುಪತ್ರೆಯಿಂದ ಸ್ವಾಮಿಯನ್ನು ಸಿಂಗರಿಸಲಾಗಿತ್ತು.
ದೇವಸ್ಥಾನದ ಆವರಣದಲ್ಲಿ ಕಮಾನಗಳನ್ನು ಪುಷ್ಪಗಳಿಂದ ಅಲಂಕರಿಸಿ ಭಕ್ತರು ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿತ್ತು. ವೈಕುಂಠ ಏಕಾದಶಿ ಅಂಗವಾಗಿ ಸ್ವಾಮಿಯ ದರ್ಶನ ಪಡೆದ ಎಲ್ಲಾ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗಿಸಲಾಯಿತು.
ತಿಮ್ಮಪ್ಪ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ.ತಿಮ್ಮಣ್ಣ, ಖಜಾಂಚಿ ಯಾದವಮೂರ್ತಿ ಹಾಗೂ ಕಾರ್ಯಕಾರಿ ಸಮಿತಿಯವರು ವೈಕುಂಠ ಏಕಾದಶಿಯಲ್ಲಿ ಪಾಲ್ಗೊಂಡಿದ್ದರು.