ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ. ಜ.07 : ಪ್ರಪ್ರಥಮ ಬಾರಿಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜನವರಿ 10 ರ ಶುಕ್ರವಾರದಂದು ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಶರಣ್ ಕುಮಾರ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕಾರ್ಯದರ್ಶಿ ಎಂ.ಪಿ. ವೆಂಕಟೇಶ್ ತಿಳಿಸಿದ್ದಾರೆ.
ಅಂದು ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್‍ಸ್ವಾಮಿ ಹಾಗೂ ಆನಂದಸ್ವಾಮಿ ನೇತೃತ್ವದಲ್ಲಿ ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ಪ್ರಕಾರೋತ್ಸವ ಉತ್ತರಭಾಗಿಲು ಪೂಜೆ , ಸತ್ಯನಾರಾಯಣ ದೇವರಿಗೆ ಅಲಂಕಾರ ಅಭಿಷೇಕ ಪೂಜೆ ಸೇವೆ ಏರ್ಪಡಿಸಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ತಮ್ಮ ಕುಟುಂಬ ಸಮೇತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತಮ್ಮತನುಮನದೊಂದಿಗೆ ಸಹಕರಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಲು ಮನವಿ ಮಾಡಲಾಯಿತು. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ 9342310469 ಸಂಪರ್ಕಿಸಬಹುದಾಗಿದೆ.