ಸುದ್ದಿಒನ್, ಚಿತ್ರದುರ್ಗ, (ಅ.17) : ನಗರದ ಮೊದಲ ನರ್ಸಿಂಗ್ ಹೋಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೈದ್ಯ ಡಾ. ರಾಮಚಂದ್ರ ನಾಯಕ (79) ಭಾನುವಾರ ಮಧ್ಯಾನ್ಹ 1: 30 ರ ವೇಳೆಗೆ ಅನಾರೋಗ್ಯದಿಂದ ನಿಧನರಾದರು.
ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಹೊರವಲಯದ ನಾಮಕ್ಕಲ್ ಗ್ಯಾlರೇಜ್ ಬಳಿ ಇರುವ (ರಾಷ್ಟ್ರೀಯ ಹೆದ್ದಾರಿ ಸಮೀಪದ) ಸ್ವಂತ ಜಮೀನಿನಲ್ಲಿ ಸೋಮವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಶಾಂತಪ್ಪ ಮೊ : 94826 70139 ಅವರನ್ನು ಸಂರ್ಕಿಸಿ.
1980 ರ ದಶಕದಲ್ಲಿ ಮೊದಲ ನರ್ಸಿಂಗ್ ಹೋಂ ಆರಂಭಿಸಿ ಜಿಲ್ಲೆಯ ಜನರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇಷ್ಟೇ ಅಲ್ಲದೇ ಅವರು ಬಣ್ಣ ಹಚ್ಚಿ ಮದಕರಿ ನಾಯಕ ಸೇರಿದಂತೆ ಅನೇಕ ನಾಟಕಗಳಲ್ಲಿ ಅಭಿನಯಿಸಿ ತಾವೊಬ್ಬ ಕಲಾಪ್ರೇಮಿ ಎಂಬುದನ್ನು ಸಾಬೀತು ಪಡಿಸಿದ್ದರು. ರಾಜಕೀಯದಲ್ಲಿಯೂ ಸಹ ಆಸಕ್ತಿ ಹೊಂದಿದ್ದರು. ಅವರ ಸಾವು ನನಗೆ ಅತೀವ ನೋವುಂಟುಮಾಡಿದೆ ಎಂದು ಅವರ ಸಮಕಾಲೀನ ವೈದ್ಯ, ಹಿರಿಯ ಪತ್ರಕರ್ತ ಹೆಚ್. ಎನ್. ತಿಪ್ಪೇರುದ್ರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…