Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಲ್ಮೀಕಿ ನಿಗಮ ಹಗರಣ ಕೇಸ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು : ವಾಲ್ಮೀಕಿ ನಿಗಮದ ಪ್ರಕರಣ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದರಿಂದ ಅಧೀಕ್ಷಕ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ, ತನಿಖೆ ನಡೆಸುತ್ತಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯನ್ನು ನೀಡಿದ್ದಾರೆ.

 

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ. ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಈ ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವಾನ ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಎಸ್ಐಟಿ ಕೂಡ ಎಲ್ಲಾ ಆಯಾಮದಿಂದಾನೂ ತನಿಖೆ ನಡೆಸುತ್ತಿದ್ದು, ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!