ರಾಯಚೂರು: ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಎಲ್ಲಾ ಕಡೆ ದಾಳಿ ನಡೆಸುತ್ತಿದ್ದಾರೆ. ಅದರಲ್ಲೂ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದವರ ಮನೆ, ಕಚೇರಿ ಮೇಲೂ ದಾಳಿ ನಡೆಸುತ್ತಿದ್ದಾರೆ. ನಿನ್ನೆಯೆಲ್ಲಾ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಅವರ ಮನೆ ಹಾಗೂ ಕಚೇರಿ ಮೇಲೂ ದಾಳಿ ನಡೆದಿತ್ತು. ಇಂದು ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ರಾಥೋಡ್ ಮನೆ ಮೇಲು ದಾಳಿ ನಡೆದಿದೆ.
ದಾಳಿ ಬಳಿಕ ಪಂಪಣ್ಣ ವಿಚಾರವಾಗಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ಪಂಪಣ್ಣ ಈ ಮೊದಲು ಶಿಕ್ಷಕ ವೃತ್ತಿಯಲ್ಲಿದ್ದರು. ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಶಾಸಕ ಬಸನಗೌಡ ದದ್ದಲ್ ಅವರ ಜೊತೆಗೆ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಈಗ ಅವರ ಜೊತೆಗೆ ಇಲ್ಲ. ಆದರೆ ಬೆಳಗ್ಗೆನೆ ಲೋಕಾಯುಕ್ತ ಅಧಿಕಾರಿಗಳು ಪಂಪಣ್ಣ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಲವು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಪಂಪಣ್ಣ ಅವರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾಗ ಅವರು ಕನ್ನಡದ ಕೋಟ್ಯಾಧಿಪತಿಯಲ್ಲಿ ಭಾಗವಹಿಸಿದ್ದರು ಎಂಬ ಸತ್ಯ ಹೊರ ಬಿದ್ದಿದೆ. ಶಿಕ್ಷಕ ವೃತ್ತಿಯಲ್ಲಿದ್ದಾಗಲೇ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದರಲ್ಲಿ 50 ಲಕ್ಷ ಹಣವನ್ನು ಗೆದ್ದಿದ್ದರು. ಇದೀಗ ಬೆಳಗ್ಗೆಯಿಂದಾನು ಹಾಸನ, ಮಂಡ್ಯ, ಬೆಳಗಾವಿ, ಕಲಬುರಗಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 50 ಲಕ್ಷ ಹಣ ಪಡೆದ ಆರೋಪ ಪಂಪಣ್ಣ ಮೇಲಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.