Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಜಯಂತಿ: ಚಿತ್ರದುರ್ಗದಲ್ಲಿ ಅದ್ಧೂರಿ ಮೆರವಣಿಗೆ

---Advertisement---

 

ಚಿತ್ರದುರ್ಗ. ಅ.07: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ನಗರದಲ್ಲಿ ನಡೆದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದಿಂದ ಭವ್ಯ ಮೆರವಣಿಗೆ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನಾಯಕ ಸಮಾಜದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

 

ಐತಿಹಾಸಿಕ ಕೋಟೆ ಮುಂಭಾಗದಿಂದ ಆರಂಭವಾದ ಅದ್ದೂರಿ ಮೆರವಣಿಗೆಯು, ಏಕನಾಥೇಶ್ವರಿ ದೇವಸ್ಥಾನ, ಹುಚ್ಚೆಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ಆನೆಬಾಗಿಲು, ಗಾಂಧಿವೃತ್ತ, ಎಸ್‌ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ವಾಲ್ಮೀಕಿ ಭವನದವರೆಗೂ ನಡೆಯಿತು.

ಮೆರವಣಿಗೆಯಲ್ಲಿ ಕಹಳೆ ವಾದನ, ತ್ರಾಷ್ ಡೋಲು, ಗೊಂಬೆ ಕುಣಿತ, ಕೀಲು ಕುದರೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸುವ ಮೂಲಕ ಸಾಂಸ್ಕೃತಿಕ ರಂಗನ್ನು ತುಂಬಿದವು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಬಾಂಧವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now