ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

suddionenews
1 Min Read

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ ಮಾತನಾಡಿದ್ದು, ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ನಿಲ್ಲಬೇಕು. ಅವರ ಬೆನ್ನೆಲುಬಾಗಿ ಇರಬೇಕು. ಅವರಿಗೆ ಶಕ್ತಿಯಾಗಿ ನಿಲ್ಲಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಪ್ರಲ್ಹಾದ್‌ ಜೋಶಿಯವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಎಲ್ಲ ಸಮಾಜದ ಜನರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರಣವಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

 

ನಮ್ಮ ಸಮಾಜದ ಕಾರ್ಯಕರ್ತರನ್ನು ನಾಯಕರನ್ನಾಗಿಸಿದ್ದೇ ಪ್ರಲ್ಹಾದ್‌ ಜೋಶಿಯವರು. ಬಂಗಾರು ಹನುಮಂತು ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ಆಗಲು ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿ ಸಹಕರಿಸಿದವರು ಪ್ರಲ್ಹಾದ್‌ ಜೋಶಿ. ಬೆಂಗಳೂರಿನಲ್ಲಿ ತಾವು ಉಪವಾಸ ಧರಣಿ ಕುಳಿತ ವೇಳೆ ತನ್ನೆಲ್ಲ ಪ್ರೋಟೋಕಾಲ್ ಮರೆತು ನನ್ನನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸಿದವರು ಪ್ರಲ್ಹಾದ್‌ ಜೋಶಿ. ಯಾವತ್ತೂ ಜಾತಿ ಭೇದ ತೋರಿದವರಲ್ಲ. ಎಲ್ಲ ಸಮಾಜ, ವರ್ಗದವರನ್ನು ಸಮಾನವಾಗಿ ಕಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *