ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಒಂದಲ್ಲ ಎರಡಲ್ಲ ನೂರಾರು ಕೋಟಿ ಹಗರಣ ನಡೆದಿದೆ. ಈ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿದೆ. ಈಗ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಮೂರು ಸಾವುರ ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಅದರಲ್ಲಿ ಹನ್ನೆರಡು ಆರೋಪಿಗಳ ವಿರುದ್ಧ ಆರೋವಿದೆ.
ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಇಡಿ ಬಂಧನಕ್ಕೆ ಒಳಗಾಗಿ, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಇಲ್ಲ. ಶಾಸಕ ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖ ಮಾಡಿಲ್ಲ. ಚಾರ್ಜ್ ಶೀಟ್ ನಲ್ಲಿ ಈ ಹಿಂದೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಎಸ್ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮೂರು ಸಾವಿರ ಪುಟಗಳ ಚಾರ್ಜ್ ಶೀಟ್ ನಲ್ಲಿ ಹಣ, ಚಿನ್ನ, ದುಬಾರಿ ವಸ್ತುಗಳನ್ನು ಜಪ್ತಿ ಮಾಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.
16.83 ಕೋಟಿ ರೂಪಾಯಿ ಹಣ, 16.252 ಕಜಿ ಚಿನ್ನ, ಲ್ಯಾಂಬರ್ಗಿ ಉರುಸ್, ಮರ್ಸಿಡೆಸ್ ಬೆಂಜ್ ಕಾರು, ತನಿಖಾಧಿಕಾರಿ ಅಕೌಂಟ್ ನಿಂದ 3.19 ಕೋಟಿ ರೂಪಾಯಿ ಹಣ ಸೇರಿದಂತೆ ವಶಪಡಿಸಿಕೊಂಡ ವಸ್ತುಗಳ ಬಗ್ಗೆ ಚಾರದಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಬಂಧನವಾಗಿರುವ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ, ಸತ್ಯನಾರಾಯಣ ಇಟ್ಕಾರಿ ತೇಜಾ, ಸಾಯಿ ಸೇರಿದಂತೆ 12 ಆರೋಪಿಗಳ ಹೆಸರನ್ನು ಉಲ್ಲೇಖ ಮಾಡಲಾಗಿದೆ.