Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ವನಮಹೋತ್ಸವ ಕಾರ್ಯಕ್ರಮ : ಕಾಡಿನ ರಕ್ಷಣೆ ಕುರಿತು ಜಾಗೃತಿ

---Advertisement---

ಸುದ್ದಿಒನ್, ಜುಲೈ. 27 : ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿದ್ದು ಹೃದಯ ಸಂಬಂಧಿ ಶ್ವಾಸಕೋಶದ ಸಂಬಂಧಿ ಖಾಯಿಲೆಗಳಿಂದ ಬಳಲುವವರ  ಸಂಖ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ನಮ್ಮ ಪರಿಸರದ ಸ್ವಚ್ಚತೆಯ ಜೊತೆಗೆ ಕಾಡನ್ನು ರಕ್ಷಿಸಿ ಬೆಳೆಸವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ವಿದ್ಯಾರ್ಥಿನಿ ಕೀರ್ತನಾ ಎಸ್ ಯು ಹೇಳಿದರು.

ಅವರು ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಕಾರ್ಯಕ್ರಮದ ವಿಶೇಷತೆಯ ಕುರಿತು ‘ಕಾಡಿದ್ದರೆ ನಾಡು, ನಾಡಿದ್ದರೆ ನಾವು’ ‘ಗಿಡ ಬೆಳೆಸಿ ಪರಿಸರ ಉಳಿಸಿ ಎಂಬ ವಿಷಯದ ಕುರಿತು ಭಾಚಣ ಮಾಡಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಹೆಚ್. ಕೆ.ಎಸ್. ಸ್ವಾಮಿ ಅವರು
‘ಕಸದಿಂದ ರಸ’ ಎಂಬಂತೆ ನಿರುಪಯುಕ್ತ ವಸ್ತುಗಳನ್ನು ಮರುಬಳಕೆ ಮಾಡಲು ತಾವು ತಂದ ಮಾದರಿಗಳನ್ನು ತೋರಿಸುತ್ತಾ ಉತ್ತೇಜಿಸಿದರು. ಗಾಂಧೀಜಿಯವರ ಕನಸಾದ ಸ್ವದೇಶಿ ವಸ್ತುಗಳ ಬಳಕೆ ಹಾಗೂ ಚರಕದ ಉಪಯೋಗದ ಬಗ್ಗೆ ತಿಳಿಸದರು. ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ತಿಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಸಮೃದ್ಧ ಪರಿಸರ ಮತ್ತು ಜಲಸಂರಕ್ಷಣೆಗೆ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ.ಪೃಥ್ವೀಶ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‌ಸಿ  ಪ್ರಾಚಾರ್ಯ ಬಸವರಾಜಯ್ಯ ಪಿ.,  ಉಪಪ್ರಾಚಾರ್ಯ  ಅವಿನಾಶ್.ಬಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಡಾ.ಹೆಚ್ ಕೆ ಎಸ್ ಸ್ವಾಮಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸುಪ್ರಿತಾ ನಿರೂಪಿಸಿದರು, ನುರೈನ್ ಸ್ವಾಗತಿಸಿ, ವಂದಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment