ಚಿತ್ರದುರ್ಗಕ್ಕೆ ವಾಣಿವಿಲಾಸ ಸಾಗರ ನೀರು ಡಿಸೆಂಬರ್ 30 ಮತ್ತು 31ರಂದು ತಾತ್ಕಾಲಿಕ ಸ್ಥಗಿತ

0 Min Read

ಚಿತ್ರದುರ್ಗ. ಡಿಸೆಂಬರ್ .28: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಸಿ.ಐ ಮತ್ತು ಎಂ.ಎಸ್ ಪೈಪ್‍ಲೈನ್‍ಗಳ ಮರು ಜೋಡಣೆ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಡಿಸೆಂಬರ್ 30 ಮತ್ತು 31 ರಂದು ಸ್ಥಗಿತಗೊಳಿಸಲಾಗುತ್ತದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ.
ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks