Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರಮಹಾಲಕ್ಷ್ಮಿ ಹಬ್ಬ : ಚಿತ್ರದುರ್ಗದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಬೇಡಿದ್ದನ್ನು ಕರುಣಿಸುವ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನನ್ನು ಸುಗಂಧರಾಜ, ಸೇವಂತಿಗೆ, ಮಲ್ಲಿಗೆ, ಕನಕಾಂಬರ, ಹಸಿರು ಪತ್ರೆ ಹಾಗೂ ಬೆಳ್ಳಿ ಬಂಗಾರದ ಒಡವೆಗಳಿಂದ ಸಿಂಗರಿಸಿ ಪೂಜಿಸಲಾಯಿತು.
ಕೆಳಗೋಟೆಯಲ್ಲಿರುವ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿಯನ್ನು ಕಿರೀಟ, ಗದೆ, ಬೆಳ್ಳಿ ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣದ ಹೂವು, ಹಾರಗಳಿಂದ ಅಲಂಕರಿಸಿ ಪೂಜಿಸಲಾಯಿತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮ ಹಾಗೂ ವರಮಹಾಲಕ್ಷ್ಮಿಯನ್ನು ಪೂಜಿಸಿ ಭಕ್ತಿ ಸಮರ್ಪಿಸಿದರು.
ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now