ಲಖನೌ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರೆಸಲು ಸುಪ್ರೀಂ ಕೋರ್ಟ್, ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಇಂದು ಇದರ ವಿಚಾರಣೆ ನಡೆಸಲಿದ್ದಾರೆ.
ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ದೇವರು ಕೂಡ ಕಾಣಿಸಿಕೊಂಡಿದೆ. ಹೀಗಾಗಿ ಇಲ್ಲಿ ದೈನಂದಿನ ಪೂಜೆ ಮಾಡಲು ಕೋರ್ಟ್ ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ.
ಮಸೀದಿಯೊಳಗೆ ವಿಡಿಯೋ ಸರ್ವೆ ಮಾಡಲು ಸೆಷನ್ ಕೋರ್ಟ್ ಅನುಮತಿ ನೀಡಿ, ಅದರಂತೆ ಸಮಿತಿಯನ್ನು ರಚಿಸಿತ್ತು. ಕೋರ್ಟ್ ಗೆ ಎಲ್ಲಾ ವರದಿಯನ್ನು ನೀಡುವ ವೇಳೆ, ಸರ್ವೇ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ನಂತರ ಅದನ್ನು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿ, ಬ್ರೇಕ್ ಹಾಕಿತ್ತು. ಬಳಿಕ ಮೇ 21ರಂದು ಸಿವಿಲ್ ನ್ಯಾಯಾಧೀಶರಿಂದ ಈ ಕೇಸನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಇಂದು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.