ದಾವಣಗೆರೆ ಡಿ.10 : ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನುಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











