Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ವರುಣನ ಆರ್ಭಟ: ಮುಂದಿನ 7 ದಿನ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಮುನ್ನೆಚ್ಚರಿಕೆ!

---Advertisement---

ಬೆಂಗಳೂರು.ಜುಲೈ.18: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಜುಲೈ 18 ರಿಂದ ಜುಲೈ 24 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ. ಜುಲೈ 18 ಮತ್ತು ಜುಲೈ 19 ರಂದು ಕರಾವಳಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಇದರೊಂದಿಗೆ ಗುಡುಗು, ಸಿಡಿಲು ಹಾಗೂ ತೀವ್ರ ಗಾಳಿ ಬೀಸಲಿದೆ. ಇನ್ನು ಜುಲೈ 20 ಮತ್ತು ಜುಲೈ 21 ರಂದು ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿ ಮುಂದುವರಿಯಲಿದ್ದು, ಜುಲೈ 22 ರಿಂದ ಜುಲೈ 24 ರವರೆಗೆ ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಏಳೂ ದಿನಗಳ ಕಾಲ ನಿರಂತರ ಮಳೆ ಮತ್ತು ಗಾಳಿಯ ಮುನ್ಸೂಚನೆ ಇದೆ. ಜುಲೈ 18 ರಂದು ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 19 ರಿಂದ ಜುಲೈ 24 ರವರೆಗೆ ಅಂದರೆ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ನಿರಂತರವಾಗಿ ಗುಡುಗು, ಸಿಡಿಲು ಸಹಿತ ಜೋರಾದ ಮೇಲ್ಮೈ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಇರಲಿದೆ. ಜುಲೈ 18 ರಂದು ದಕ್ಷಿಣ ಒಳನಾಡಿನ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 19 ರಿಂದ ಜುಲೈ 24 ರವರೆಗಿನ ಮುಂದಿನ ದಿನಗಳಲ್ಲಿ ತೀವ್ರ ಗಾಳಿ, ಗುಡುಗು ಮತ್ತು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

Join WhatsApp

Join Now

Join Telegram

Join Now