Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ವರುಣನ ಅಬ್ಬರ; ಮುಂಜಾಗ್ರತಾ ಕ್ರಮವಾಗಿ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

---Advertisement---

ಬೆಂಗಳೂರು.ಜುಲೈ.06: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವು ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಪ್ರಕಟಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಹವಾಮಾನದ ತೀವ್ರತೆಯನ್ನು ಗಮನಿಸಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜುಲೈ 6ರಂದು ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಪದವಿ ಪೂರ್ವ (ಪಿಯು) ಕಾಲೇಜುಗಳಿಗೂ ರಜೆ ನೀಡಿ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿಯೂ ವರುಣನ ಆರ್ಭಟ ಜೋರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಅವರು ಆದೇಶಿಸಿದ್ದಾರೆ.
ಅದೇ ರೀತಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ತಹಶೀಲ್ದಾರ್ ಸುಪ್ರಿತಾ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now