Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್-ಪೊಲೀಸ್ ಇಲಾಖೆ ಸಹಯೋಗ : ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಜಾಗೃತಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 06 : ನಗರದ ಗಾಂಧಿ ವೃತ್ತದಲ್ಲಿ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸರ ಸಹಯೋಗದೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಯಿತು. ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು, ಸಿಗ್ನಲ್ ಪಾಲಿಸುವುದು ಮತ್ತು ಅತಿ ವೇಗಕ್ಕೆ ಕಡಿವಾಣ ಹಾಕುವ ಮೂಲಕ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಹೇಳಲಾಯಿತು.

ಬಿಸಿಲಿನ ಬೇಗೆಯಲ್ಲೂ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಶ್ರಮಿಸುವ ಸಂಚಾರಿ ಇನ್ಸ್‌ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಲಾಯಿತು. ಅವರ ದಣಿವಾರಿಸಲು ಕ್ಲಬ್ ವತಿಯಿಂದ ಕೂಲ್ ಬಾಟಲಿಗಳನ್ನು ವಿತರಿಸುವ ಮೂಲಕ ಗೌರವ ಅರ್ಪಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕ್ಲಬ್ಬಿನ ಅಧ್ಯಕ್ಷರಾದ ರಶ್ಮಿ ಹರೀಶ್, ಕಾರ್ಯದರ್ಶಿ ಸೌಮ್ಯ ಹಾಗೂ ಲಕ್ಷ್ಮಣ್, ಕೋಟೇಶ್ವರ ಗುಪ್ತ, ಪ್ರವೀಣ, ಸುಹಾಸ್ ಇವರುಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now