Connect with us

Hi, what are you looking for?

ಪ್ರಮುಖ ಸುದ್ದಿ

ಏಪ್ರಿಲ್ 14 ರಿಂದ ಚಳ್ಳಕೆರೆ, ಮೊಳಕಾಲ್ಮೂರು ಭಾಗದ ಹಳ್ಳಿಗಳಿಗೆ ಹರಿಯಲಿದೆ ವೇದಾವತಿ ನೀರು

ಚಿತ್ರದುರ್ಗ : ವಾಣಿ ವಿಲಾಸ ಸಾಗರ ಜಲಾಶಯದಿಂದ ವೇದಾವತಿ ನದಿ ಪಾತ್ರದ ಮೂಲಕ ಹಿರಿಯೂರು ಮತ್ತು ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕಿನ ನದಿ ಪಾತ್ರದ ಹಳ್ಳಿಗಳಿಗೆ ಏಪ್ರಿಲ್ 14 ರಿಂದ ಕುಡಿಯುವ ನೀರು ಹರಿಸಲಾಗುತ್ತದೆ.

ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಪ್ರಸ್ತುತ 9.97 ಟಿಎಂಸಿ ನೀರಿನ ಸಂಗ್ರಹಣೆ ಇದ್ದು, ಮಾರ್ಚ್ 24 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೇಸಿಗೆಯಲ್ಲಿ ಕುಡಿಯವ ನೀರಿನ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯಲ್ಲಿ ನೀರು ಹರಿಸಲು ಅನುಮೋದನೆ ನೀಡಲಾಗಿದೆ.

ವಾಣಿ ವಿಲಾಸ ಸಾಗರ ಜಲಾಶಯದಿಂದ ವೇದಾವತಿ ನದಿ ಪಾತ್ರದಲ್ಲಿ ಚಳ್ಳಕೆರೆ ಮತ್ತು ಹಿರಿಯೂರು ಕ್ಷೇತ್ರದ ಕಾತ್ರಿಕೇನಹಳ್ಳಿ ಅಣೆಕಟ್ಟು ಮುಖಾಂತರ ವೇದಾವತಿ ನದಿ ಪಾತ್ರದಲ್ಲಿ ಬರುವ ಲಕ್ಕವ್ವನಹಳ್ಳಿ, ಕಸವನಹಳ್ಳಿ, ಹಳೆಯಳನಾಡು, ಕೂಡ್ಲಹಳ್ಳಿ, ತೊರೆಓಬೇನಹಳ್ಳಿ ಬ್ಯಾರೇಜ್‍ಗಳಲ್ಲಿಯ Scouring Sluice gates ಗಳನ್ನು ತೆಗೆದಿರಿಸಿ, ಬ್ಯಾರೇಜ್‍ಗಳ ಮುಖಾಂತರ ನೀರು ಸರಾಗವಾಗಿ ಹರಿದು ಮೊಳಕಾಲ್ಮೂರು ಕ್ಷೇತ್ರದ ಗಡಿ ತಲುಪುವಂತೆ ಮಾಡಲು ಸಣ್ಣ ನೀರಾವರಿ ಇಲಾಖೆಗೆ ತಿಳಿಸಲಾಗಿದೆ.

ಬ್ಯಾರೇಜ್‍ಗಳ ಮುಖಾಂತರ ನೀರನ್ನು ಹರಿಸುವುದು ಒಳಗೊಂಡಂತೆ ಚಳ್ಳಕೆರೆ ಕ್ಷೇತ್ರದ ನದಿ ಪಾತ್ರದಲ್ಲಿ ಕುಡಿಯುವ ನೀರಿಗಾಗಿ ನಿರ್ಮಿಸಿರುವ ಬೊಂಬೇರಹಳ್ಳಿ, ಚೌಳೂರು ಮತ್ತು ಪರಶುರಾಂಪುರ ಗ್ರಾಮಗಳು, ಮೊಳಕಾಲ್ಮೂರು ಕ್ಷೇತ್ರದಲ್ಲಿ ಪಡಗಲಬಂಡೆ, ಹರವಿಗೊಂಡವನಹಳ್ಳಿ, ಹತ್ತಿರ ನಿರ್ಮಿಸಿರುವ ಬ್ಯಾರೇಜ್‍ಗಳ ಮುಖಾಂತರ ನೀರು ಹರಿಸಲು ಆದೇಶ ನೀಡಲಾಗಿದೆ.

ನೀರು ಹರಿಸುವುದರಿಂದ ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯ ವೇದಾವತಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರಲು ಹಾಗೂ ಜಾನುವಾರುಗಳ ಸುರಕ್ಷತೆ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಲು ಎಚ್ಚರಿಸಲಾಗಿದೆ.

ವೇದಾವತಿ ನದಿ ಪಾತ್ರದಲ್ಲಿ ಮತ್ತು ಕಾಲುವೆ ಮುಖಾಂತರ ನೀರು ಹರಿಸುವ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಬಳಸದಂತೆ ಅನಧಿಕೃತ ಪಂಪ್‍ಸೆಟ್‍ಗಳನ್ನು ಅಳವಡಿಸದೆ ಕಾನೂನು ಬಾಹಿರವಾಗಿ ನೀರನ್ನು ಬಳಸದಂತೆ ಹಾಗೂ ಸರ್ಕಾರದ ಆಸ್ತಿಗಳಿಗೆ ಹಾನಿಯಾಗದಂತೆ ಸುರಕ್ಷತೆ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನಾ ವಿಭಾಗದ ಹಿರಿಯೂರು ಕ್ಯಾಂಪ್ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ವೇದಾವತಿ ನದಿ ಪಾತ್ರದಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಬರುವ ಗ್ರಾಮಗಳು: ಕಾತ್ರಿಕೆನಹಳ್ಳಿ, ಲಕ್ಕವ್ವನಹಳ್ಳಿ, ಹಿರಿಯೂರು, ಪಟ್ರೇಹಳ್ಳಿ, ಗುಡ್ಲು, ಆಲೂರು, ಪಿಟ್ಲಾಲಿ, ಕಸವನಹಳ್ಳಿ, ರಂಗನಾಥಪುರ, ಉಪ್ಪಳಗೆರೆ, ದೊಡ್ಡಕಟ್ಟೆ, ಹೊಸಯಳನಾಡು, ನಾಗೇನಹಳ್ಳಿ, ಕೂಡ್ಲಹಳ್ಳಿ, ಮಸ್ಕಲ್, ಬ್ಯಾಡರಹಳ್ಳಿ, ದೇವರಕೊಟ್ಟ, ತೊರೆಓಬೇನಹಳ್ಳಿ, ಕಂಬತ್ತನಹಳ್ಳಿ.
ವೇದಾವತಿ ನದಿ ಪಾತ್ರದಲ್ಲಿ ಚಳ್ಳಕೆರೆ, ಮೊಳಕಾಲ್ಮೂರಿನಲ್ಲಿ ಬರುವ ಗ್ರಾಮಗಳು:
ಗೊಲ್ಲರಹಟ್ಟಿ, ಬಂದರಿನಹಟ್ಟಿ, ಕಲ್ಮರಹಳ್ಳಿ, ಹೊಸಹಳ್ಳಿ, ಸಾಲುಹುಣಸೆ, ಸೂಗೂರು, ಗೊರಲತ್ತು, ಬುಡುರುಕುಂಟೆ, ತೊರೆಬೀರನಹಳ್ಳಿ, ನಾರಯಾಣಪುರ, ಕೂಣಿಗೆರೆನಹಳ್ಳಿ, ಯಲಗಟ್ಟೆ, ನಲ್ಲೂರಹಳ್ಳಿ, ಬೊಂಬೇರಹಳ್ಳೀ, ವಡೇರಹಳ್ಳಿ, ಗೋಸಿಕೆರೆ, ಸುರ್ನಹಳ್ಳಿ, ಚೌಳೂರು, ಅಲ್ಲಾಪುರ, ಪರಶುರಾಂಪುರ, ಪಗಡಲಬಂಡೆ, ಜಾಜೂರು, ನಾಗಗೊಂಡನಹಳ್ಳಿ, ಮೋದುರು, ಗುಡಿಹಳ್ಳಿ, ತಪ್ಪಗೊಂಡವನಹಳ್ಳಿ, ಕಸವಿಗೊಂಡವನಹಳ್ಳಿ, ಮೈಲನಹಳ್ಳಿ, ರೇಣುಕಾಪುರ, ಬೂದಿಹಳ್ಳಿ, ಬಸಾಪುರ ಬೊಗನಹಳ್ಳಿ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!