ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.20 : ಇನ್ನರ್‍ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷರಾಗಿ ವೀಣ ಜಯರಾಂ, ಕಾರ್ಯದರ್ಶಿಯಾಗಿ ಶೋಭ ರಾಮಚಂದ್ರ ಇವರುಗಳ ಪದಗ್ರಹಣ ದವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಂ ಇನ್ನರ್‍ವೀಲ್ಹ್ ಭವನದಲ್ಲಿ ಭಾನುವಾರ ನಡೆಯಿತು.
ಪದಗ್ರಹಣ ಸ್ವೀಕರಿಸಿ ಮಾತನಾಡಿದ ಇನ್ನರ್‍ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ವೀಣ ಜಯರಾಂ ನಾಲ್ಕು ವರ್ಷಗಳ ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಫಲವಾಗಿ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನನ್ನ ಅಧಿಕಾರವಧಿಯಲ್ಲಿ ಹಿರಿಯ ನಾಗರೀಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು. ಸರ್ಕಾರಿ ಶಾಲೆಗಳ ಬಲವರ್ಧನೆ ಜೊತೆಗೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇಪ್ಪತ್ತಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಿದ್ದೇನೆ. ಇದರಿಂದ ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ ಇನ್ನರ್‍ವೀಲ್ಹ್ ಕ್ಲಬ್ 102 ವರ್ಷಗಳನ್ನು ಪೂರೈಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವೀಣ ಸ್ವಾಮಿ ಪದಗ್ರಹಣ ನೆರವೇರಿಸಿದರು.
ಜ್ಯೋತಿ ಲಕ್ಷ್ಮಣ್ ಬುಲೆಟಿನ್ ಬಿಡುಗಡೆಗೊಳಿಸಿದರು.
ಭಾಗ್ಯಲಕ್ಷ್ಮಿ, ವನಜಾ ಅನಂತರಾಜ್, ಪೂಜಾ ಪ್ರದೀಪ್ ಇವರುಗಳು ವೇದಿಕೆಯಲ್ಲಿದ್ದರು. ರೂಪ ಜನಾರ್ಧನ್, ಪಾಸ್ಟ್ ಪ್ರೆಸಿಡೆಂಟ್ ಮೋಕ್ಷರುದ್ರಸ್ವಾಮಿ, ಗಾಯತ್ರಿ ಶಿವರಾಂ, ಮಾಧುರಿ ಮಧುಪ್ರಸಾದ್, ಶ್ಯಾಮಲ ಶಿವಪ್ರಕಾಶ್ ಇನ್ನು ಅನೇಕರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












