Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆ : ಶಿವಕುಮಾರ್ ಪಟೇಲ್ ಬಣಕ್ಕೆ ಜಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 28 : ನಗರದ ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‍ನ 5 ವರ್ಷದ ಆಡಳಿತ ಮಂಡಳಿ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶಿವಕುಮಾರ್ ಪಟೇಲ್ ಗುಂಪಿನ ಎಲ್ಲಾ 11 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಈ ಸೊಸೈಟಿಯಲ್ಲಿ 373 ಜನ ಮತದಾರರಿದ್ದು ಇದರಲ್ಲಿ 345 ಜನ ಇಂದು ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿದ್ದಾರೆ.

ಇದರಲ್ಲಿ ಸಾಮಾನ್ಯ ಕ್ಷೇತ್ರದಿಂದ
ಶಿವಕುಮಾರ್ ಪಟೇಲ್(253)
ಬಿ.ಎಂ. ಕರಿಬಸಯ್ಯ(205)
ಜೆ.ಎಸ್.ಪ್ರಸಾದ್ (190)
ಜಿ.ಟಿ.ಸುರೇಶ್(187)
ಸಿ.ಚಂದ್ರಪ್ಪ(182) ಕೆ.ಹೆಚ್. ಮುರುಗೇಂದ್ರಪ್ಪ(180)
ಡಿ.ಎಸ್.ರಾಜೇಶ್ (163) ಆಯ್ಕೆಯಾಗಿದ್ದಾರೆ.

ಮಹಿಳಾ ಮೀಸಲು ಕ್ಷೇತ್ರದಿಂದ
ಜಿ.ಆರ್.ನಿವೇದಿತಾ (222)
ಶೈಲಜ ಎಂ.(194)
ಹಿಂದುಳಿದ ವರ್ಗ ಬಿ ನಿಂದ ರೀನಾ ಕೆ.ಜಿ. (217) ಹಿಂದುಳಿದ ವರ್ಗ ಎ ನಿಂದ ನೀಲಕಂಠೇಶ್ವರಪ್ಪ ಡಿ.ಎಸ್. (198) ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾದಿಸಿದ ನಂತರ ಪಕ್ಕದಲ್ಲಿನ ಶ್ರೀ ನೀಲಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ವಿಜಯಿ ಅಭ್ಯರ್ಥಿಗಳು ತಮ್ಮ ಗೆಲುವಿಗೆ ಸಹಾಯ ಮಾಡಿದ ಭಗವಂತನಿಗೆ ಕೃತಘ್ನತೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‍ನ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಶಿವಕುಮಾರ್ ಪಟೇಲ್ ನಮ್ಮ ತಂಡ ಈ ಚುನಾವಣೆಯಲ್ಲಿ ಅಭೂತಪೂರ್ವವಾದ ಗೆಲುವನ್ನು ಸಾಧಿಸಲಾಗಿದೆ ನಮ್ಮ ಗೆಲುವಿಗೆ ಸಹಕಾರ ನೀಡಿದ ಎಲ್ಲರಿಗೂ ಸಹಾ ಕೃತಘ್ನತೆಯನ್ನು ಸಲ್ಲಿಸುತ್ತೇನೆ ಇದಕ್ಕೆ ನೀವೆಲ್ಲಾ ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಕಾರಣವಾಗಿದೆ. ಇದನ್ನು ಮುಂದಿನ ದಿನಗಳಲ್ಲಿಯೂ ಸಹಾ ನಡೆಸಿಕೊಂಡು ಸಹಾ ಸೊಸೈಟಿ ಹಾಗೂ ಸಮಾಜಕ್ಕೆ ಸಹಾ ಕೈಜೋಡಿಸಿ, ಎಲ್ಲರೂ ಒಗ್ಗಟಾಗಿ ಮುಂದಿನ ಕೆಲಸವನ್ನು ಮಾಡೋಣ ಮುಂದಿನ  ದಿನದಲ್ಲಿ ನನ್ನಿಂದ ಅತಿ ಹೆಚ್ಚಿನ ಸೇವೆಯನ್ನು ನಿರೀಕ್ಷೆ ಮಾಡಲಾಗುತ್ತದೆ. ಇದರಲ್ಲಿ ನಿಮ್ಮ ಸಲಹೆ ಸಹಕಾರ ಅತಿ ಮುಖ್ಯವಾಗಿದೆ, ತಪ್ಪುಗಳನ್ನು ಮಾಡಿದರೆ ಅದನ್ನು ತಿದ್ದಿಕೊಂಡು ನಡೆಯಲಾಗುವುದು. ನಾನು ತಪ್ಪು ಮಾಡಲು ಯಾವುದೇ ಕಾರಣಕ್ಕೂ ಅಸ್ಪದವನ್ನು ನೀಡುವುದಿಲ್ಲ ಕಳೆದ ಐದು ವರ್ಷದಲ್ಲಿ ಸೊಸೈಟಿಯನ್ನು ಉತ್ತಮವಾಗಿ ತೆಗೆದುಕೊಂಡು ಹೋಗಲಾಗಿದೆ. ಹಲವಾರು ಅಭೀವೃದ್ದಿ ಕಾರ್ಯವನ್ನು ಕೈಗ್ಗೊಳ್ಳಲಾಗಿದೆ ಮುಂದಿನ ದಿನದಲ್ಲಿಯೂ ಸಹಾ ಸೊಸೈಟಿ ಹಾಗೂ ಸಮಾಜಕ್ಕೆ ನನ್ನ ಕೈಲಾದ ಸಹಾಯವನ್ನು ಮಾಡುವುದರ ಮೂಲಕ ಸೊಸೈಟಿ ಮತ್ತು ಸಮಾಜದ ಬೆಳವಣಿಗೆಗೆ ನೆರವಾಗುವುದಾಗಿ ತಿಳಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...