Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರೇಂದ್ರ ಪಪ್ಪಿ ಕೇಸ್ : ಚಳ್ಳಕೆರೆಯ ಹಲವೆಡೆ ಇಂದು ಮತ್ತೆ ಇಡಿ ದಾಳಿ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ದಾಳಿ ವೇಳೆ ಸಿಕ್ಕಿರುವ ಎಲ್ಲಾ ದಾಖಲೆಗಳನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್ ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಆನ್ಲೈನ್ ಬೆಟ್ಟಿಂಗ್ ನಲ್ಲಿ ಅಲ್ಪಾವಧಿಯಲ್ಲಿಯೇ ವೀರೇಂದ್ರ ಪಪ್ಪಿ ಅವರು 2 ಸಾವಿರ ಕೋಟಿ ಸಂಪಾದನೆ ಮಾಡಿದ್ದರು. ಹೀಗಾಗಿ ಇಡಿ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿದೆ. ಇಂದು ಚಳ್ಳಕೆರೆ ಪಟ್ಟಣದ ಹಲವೆಡೆ ದಾಳಿ ನಡೆಸಿದ್ದಾರೆ. ಆಗಸ್ಟ್ 29 ರಂದು ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಅಕ್ರಮ ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿನಿಂದ ಕರೆತಂದಿದ್ದರು. ಬಂಧಿಸಿದ ಬಳಿಕ ಹಲವು ಆಯಾಮಗಳಲ್ಲಿ ವಿಚಾರಣೆಯನ್ನು ನಡೆಸಿದ್ದರು. ವೀರೇಂದ್ರ ಪಪ್ಪಿ, ಅವರ ಸಹೋದರ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲಿಯೂ ತೀವ್ರ ತಪಾಸಣೆ ನಡೆಸಿದ್ದರು.

ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳ ಮೇಲೂ ದಾಳಿ ನಡೆಸಿದ್ದರು. ಶಾಸಕ ವೀರೇಂದ್ರ ಪಪ್ಪಿ ಈಗಲೂ ಇಡಿ ಅಧಿಕಾರಿಗಳ ವಶದಲ್ಲಿಯೇ ಇದ್ದಾರೆ. ವಶಪಡಿಸಿಕೊಂಡ ದಾಖಲೆಗಳ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ನಮ್ಮ ಬಳಿ ಎಲ್ಲದರ ದಾಖಲೆ ಇದೆ. ಅಧಿಕಾರಿಗಳು ಏನನ್ನೇ ಕೇಳಿದರು ನಾವೂ ಉತ್ತರ ಕೊಡುವುದಕ್ಕೆ ರೆಡಿ ಇದ್ದೇವೆ ಎಂದು ಪಪ್ಪಿ ಸಹೋದರ ತಿಳಿಸಿದ್ದರು. ಇಡಿ ಅಧಿಕಾರಿಗಳು ದಾಳಿ ಮಾಡಿದಾಗ ಪಪ್ಪಿ ಸಾಮ್ರಾಜ್ಯದಲ್ಲಿ ವಜ್ರ  ವೈಡೂರ್ಯಗಳೇ ಸಿಕ್ಕಿದ್ದವು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...