ಸಚಿವ ಸ್ಥಾನಕ್ಕಾಗಿ ವೀರೇಂದ್ರ ಪಪ್ಪಿ 300 ಕೋಟಿ ಇನ್ವೆಸ್ಟ್ : ಆರ್.ಅಶೋಕ್

2 Min Read

ಬೆಂಗಳೂರು: ಬೆಟ್ಟಿಂಗ್ ಹಗರಣದಲ್ಲಿ ಬಂಧಿಯಾಗಿರುವ ವೀರೇಂದ್ರ ಪಪ್ಪಿ ಅವರ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಶಾಕಿಂಗ್ ವಿಚಾರವೊಂದನ್ನ ಹೇಳಿದ್ದಾರೆ. ಶಾಸಕ ವೀರೇಂದ್ರ ಪಪ್ಪಿ ಸದ್ಯ ಇಡಿ ವಶದಲ್ಲಿದ್ದಾರೆ. ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಜ್ರ, ಔಢೂರ್ಯ, ಚಿನ್ನದ ಗಣಿಯನ್ನೇ ವೀರೇಂದ್ರ ಪಪ್ಪಿ ಹೊಂದಿದ್ದು, ಎಲ್ಲದರ ತನಿಖೆ ನಡೆಯುತ್ತಿದೆ. ಇದರ ನಡುವೆ ಆರ್.ಅಶೋಕ್, ಪಪ್ಪಿ ಅವರ ಬಗ್ಗೆ ಮಾತನಾಡಿದ್ದಾರೆ.

ಬಿಹಾರ ಚುನಾವಣೆಗಾಗಿ ಕಾಂಗ್ರೆಸ್ ಶಾಸಕ ಪಪ್ಪಿ 300 ಕೋಟಿ ಹಣ ಕೊಟ್ಟು, ಹೈಕಮಾಂಡ್ ಬಳಿ ಮಂತ್ರಿ ಸ್ಥಾನ ಗಿಟ್ಟಿಸಲು ಪ್ರಯತ್ನಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಹುಲ್ ಗಾಂಧಿ ಅವರ ಎಟಿಎಂ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?. ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಸಿಎಂ, ಡಿಸಿಎಂ, ಮಂತ್ರಿಗಳು ತಮ್ಮ ಇರುವ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡ ನೀವೇ ಊಹಿಸಿಕೊಳ್ಳಿ.

ಒಂದು ಕಡೆ ಜನರಿಗೆ ಕ್ಯಾಸಿನೋ, ಜೂಜು, ಬೆಟ್ಟಿಂಗ್ ಆಡಿಸಿ ಬಡವರ ಮನೆಹಾಳು ಮಾಡಿ ಅಡ್ಡದಾರಿಯಲ್ಲಿ ದುಡ್ಡು ಮಾಡುವುದು. ಆ ಪಾಪದ ಹಣದಲ್ಲಿ ಟಿಕೆಟ್ ಪಡೆದು, ಚುನಾವಣೆ ಎದುರಿಸಿ, ಹೈಕಮಾಂಡ್ ಗೆ ಕಪ್ಪ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವುದು. ಆಮೇಲೆ ಮಂತ್ರಿಗಿರಿ ಬಳಸಿಕೊಂಡು ಇನ್ನಷ್ಟು ಲೂಟಿ ಮಾಡುವುದು. ಇದು ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹೆಣೆದಿರುವ ವಿಷ ವರ್ತುಲ. ತೆಲಂಗಾಣ ಚುನಾವಣೆಗೆ, ಲೋಕಸಭೆ ಚುವಾವಣೆಗೆ ವಾಲ್ಮೀಕಿ ನಿಗಮದ ಹಣ ಸೇರಿದಂತೆ ಸಾವಿರಾರು ಕೋಟಿ ಲಪಟಾಯಿಸಿದ್ದಾಯ್ತು. ಈಗ ಬಿಹಾರ ಚುನಾವಣೆಗೆ ಕನ್ನಡಿಗರ ತೆರಿಗೆ ಹಣ ಇನ್ನೆಷ್ಟು ಲೂಟಿ ಆಗುತ್ತದೆಯೋ ಗೊತ್ತಿಲ್ಲ.

 

ಈ ರೀತಿ ಪಾಪದ ಹಣದಲ್ಲಿ ಚುನಾವಣೆ ನಡೆಸುವ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಪ್ರಕ್ರಿಯೆ ಬಗ್ಗೆ, ಚುನಾವಣಾ ಆಯೋಗದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದ್ಯಾ..? ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷಕ್ಕೆ. ಅಂದಹಾಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರ ಚುನಾವಣೆಗೆ ಎಷ್ಟು ಕೋಟಿ ಹಣ ಲೂಟಿ ಮಾಡಿ ರಾಹುಲ್ ಗಾಂಧಿ ಅವರಿಗೆ ಚಂದಾ ನೀಡುವ ಭರವಸೆ ಕೊಟ್ಟಿದ್ದಾರೆ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

Share This Article
Enable Notifications OK No thanks