ಚಿತ್ರದುರ್ಗ. ಜೂ.25 : ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.
ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











