ಮೊಳಕಾಲ್ಮೂರು : ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ಹಾನಗಲ್ ಬಳಿ ನಡೆದಿದೆ.
ಮೃತನನ್ನು ಮೊಳಕಾಲ್ಮೂರು ಪಟ್ಟಣದ ಕೋಟೆ ಬಡಾವಣೆ ನಿವಾಸಿ ಅರುಣ್ಕುಮಾರ್ (23) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಕೂಲಿ ಕೆಲಸ ಮುಗಿಸಿಕೊಂಡು ಹಾನಗಲ್ ನಿಂದ ಬರುವಾಗ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಅರುಣ್ ಕುಮಾರ್ ನನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


