ನವದೆಹಲಿ: ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಈ ಬಂಧನವನ್ನು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಖಂಡಿಸಿದ್ದು, ಎಎಪಿ ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ.
Tajinder Bagga could be from a different party, one could have ideological differences. But Political vendetta, of @ArvindKejriwal & @BhagwantMann, to settle personal scores through Punjab police is a cardinal sin… Stop tarnishing the image of Punjab Police by Politicising it..
— Navjot Singh Sidhu (@sherryontopp) May 6, 2022
ಇದೊಂದು ಸೇಡಿನ ರಾಜಕಾರಣ ಎಂದು ಎಎಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಧು, ತಜೀಂದರ್ ಬೇರೆ ಪಕ್ಷದವರೇ ಆಗಿರಬಹುದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನೆ ಅವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ. ಹೀಗೆ ಪಂಜಾಬ್ ಪೊಲೀಸರನ್ನು ಬಳಸಿಕೊಳ್ಳುವುದು ಮಹಾ ಪಾಪ.
ಪಂಜಾಬ್ ಪೊಲೀಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಪಂಜಾಬ್ ಪೊಲೀಸರು ತಜೀಂದರ್ ಅವರನ್ನು ನ್ಯಾಯಾಲಯಕ್ಕೆ ಕರೆತರುತ್ತಿರುವುದಾಗಿ ಅವರ ಹೇಳಿಕೆಯಲ್ಲಿ ತಿಳಿಸಿದ್ದರು. ದೆಹಲಿಯಿಂದ ಮೊಹಾಲಿಗೆ ಬರುತ್ತಿದ್ದ ವಾಹನಗಳನ್ನು ಹರಿಯಾಣದ ಕುರುಕ್ಷೇತ್ರದಲ್ಲಿಯೇ ತಡೆಹಿಡಿಯಲಾಗಿದೆ ಎನ್ನಲಾಗಿದೆ.