ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸರೋಜಾದೇವಿ ಇಂದು ನಿಧನರಾಗಿದ್ದಾರೆ. ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕನ್ನಡ ಚಿತ್ರರಂಗದ ಪ್ರಮುಖ ನಾಟಿಯಾಗಿದ್ದವರು. ಇಂದು ಎಲ್ಲರನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸರೋಜಾದೇವಿ ಅವರನ್ನು ಅಭಿನಯ ಸರಸ್ವತಿ ಎಂದೇ ಕರೆಯಲಾಗುತ್ತಿತ್ತು. ಕನ್ನಡ ಮಾತ್ರವಲ್ಲ ಆಗಿನ ಕಾಲಕ್ಕೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು. 161 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದರು. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.
ನಾಡೋಡಿ ಮನ್ನನ್, ಕರ್ಪೂತ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ಎಂಬ ತಮಿಳು ಸಿನಿಮಾಗಳಲ್ಲೂ ನಟಿಸಿದ್ದರು. ಸರೋಜಾ ದೇವಿ ಅವರಿಗೆ 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್