Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ರವರಿಂದ ಮಾದಾರ ಚೆನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂ. 28 : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಯವರಿಗೆ ನಿನ್ನೆ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಪ್ರಧಾನ ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು.

ಇನ್ಫೋಸಿಸ್ ಸಂಸ್ಥೆಯ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥರು ಹಾಗೂ ಅಕ್ಷಯಪಾತ್ರೆ ಯೋಜನೆಯ ಸಹ ಸಂಸ್ಥಾಪಕ ಟಿ.ವಿ.ಮೋಹನದಾಸ್ ಪೈ, ಮತ್ತು ರಾಜ್ಯದ ಅರಣ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಗಳಾಗಿ ಸೇವೆ ಸಲ್ಲಿಸಿದ್ದ ಎ.ಸಿ.ಲಕ್ಷ್ಮಣ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು.

ಉಳಿದಂತೆ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ಆಡಳಿತ, ಶಿಕ್ಷಣ, ಸಂಸ್ಕೃತಿ, ಕೃಷಿ, ಪತ್ರಿಕೋದ್ಯಮ, ಸಾಹಿತ್ಯ, ಸಂಶೋಧನೆ,-ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ 15 ಮಂದಿ ಅರ್ಹರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ. ಅದರಂತೆ ಎಸ್.ವಿ.ರಂಗನಾಥ್, ಎಚ್.ಎ.ರಂಗನಾಥ್, ಎಂ.ಆರ್.ಜೈಶಂಕರ್, ಬಿ.ಎಂ.ಕೊಕರೆ, ಡಾ.ವಾಮ ದೇವಪ್ಪ, ಕೇಶವ ಆಯ್ಕೆ, ವಿಕ್ರಮ್ ಮುತ್ತಣ್ಣ, ಜಯಪ್ರಕಾಶ್ ಗೌಡ, ರವಿಕುಮಾರ್, ಯಶಸ್ವಿನಿ ಶರ್ಮ, ಪ್ರೇಮಾ ಗಣೇಶ್, ರಶ್ಮಿ ಸಾವಂತ್, ತ್ರಿಸ್ಟಾ ರಾಮಮೂರ್ತಿ, ಧರ್ಮೇಂದ್ರ, ಮಹೇಶ್ ಗೌಡ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ಶ್ರೀಗಳ ಸಾನಿಧ್ಯವಹಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್ ನಾಡ ಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಎಂ.ಕೃಷ್ಣೇಗೌಡ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now