Vice Presidential Election 2022 : ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್

 

ದೆಹಲಿ: ಎನ್ ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅನಿರೀಕ್ಷಿತ ಹೆಸರನ್ನು ಘೋಷಿಸಿದೆ. ಜಗದೀಪ್ ಧನಕರ್ (71) ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಅಂತಿಮಗೊಳಿಸಲಾಗಿದೆ. ಪ್ರಸ್ತುತ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರುಉ ಜಗದೀಪ್ ಧನಕರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.

ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ವೇಳಾಪಟ್ಟಿಯ ಪ್ರಕಾರ ಆಗಸ್ಟ್ 6 ರಂದು ಉಪಾಧ್ಯಕ್ಷರ ಚುನಾವಣೆ ನಡೆಯಬೇಕು. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *