ಹಲವು ದಿನಗಳಿಂದ ಕುಸ್ತಿ ಪಟುಗಳು ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದರು. ಕಿರುಕುಳದಿಂದ ನೊಂದು, ನ್ಯಾಯಕ್ಕಾಗಿ ಕಣ್ಣೀರಿಟ್ಟಿದ್ದರು. ಇದೀಗ ಕುಸ್ತಿಪಟುಗಳಿಗೆ ನ್ಯಾಯ ಸಿಕ್ಕಿದೆ. ಬ್ರಿಜ್ ಭೂಷಣ್ ಶರಣ್ ವಿರುದ್ಧ ಫೋಕ್ಸೋ ಕಾಯಿದೆ ಅಡಿ ದೂರು ದಾಖಲಾಗಿದೆ.
ಭಾರತಕ್ಕೆ ಅಂತರಾಷ್ಟ್ರೀಯ ಪದಕಗಳನ್ನು ತಂದು ಕೊಟ್ಟಂತ ಮಹಿಳಾಮಣಿಗಳು ನಮಗೆ ನ್ಯಾಯ ಕೊಡಿಸಿ ಅಂತ ಪಟ್ಟು ಹಿಡಿದಿದ್ದರು. ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ವಿರುದ್ಧ ಮಹಿಳಾಕುಸ್ತಿ ಪಟುಗಳು ರೊಚ್ಚಿಗೆದ್ದಿದ್ದರು. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆತನನ್ನು ಬಂಧಿಸಿ, ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು. ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೀಗ ಕುಸ್ತಿಪಟುಗಳಿಗೆ ಮೊದಲ ಜಯ ಸಿಕ್ಕಿದೆ. ಬ್ರಿಜ್ ಭೂಷಣ್ ಶರಣ್ ವಿರುದ್ಧ ಫೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗಿದೆ. ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ. ಅಪ್ರಾಪ್ತೆ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಲಾಗಿದೆ. ಉಳಿದ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇಲೆ ಎರಡನೇ ಎಫ್ಐಆರ್ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ನೀಡಿದ ನೋಟೀಸ್ ಬೆನ್ನಲ್ಲೇ ಈ ಕೇಸ್ ದಾಖಲಿಸಲಾಗಿದೆ.