Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪ ಚುನಾವಣೆಯಲ್ಲಿ ಗೆಲುವು ; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿಜಯೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 04 : ರಾಜ್ಯದಲ್ಲಿ ನಡೆದ ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಬೇರಿ ಭಾರಿಸಿದ ಹಿನ್ನಲೆಯಲ್ಲಿ ಸೋಮವಾರ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯ ಬಳಿಯಲ್ಲಿ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್‍ರವರ ನೇತೃತ್ವದಲ್ಲಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ತಾಜ್‍ಪೀರ್ ದಾವಣಗರೆ ದಕ್ಷಿಣದಲ್ಲಿ ಸಮರ್ಥ ಶಾಮನೂರು ಹಾಗೂ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ರವರ ಗೆಲುವು ನಮ್ಮ ಪಕ್ಷದ ಸಿದ್ದಾಂತದ ಗೆಲುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ಪರಿಶ್ರಮದ ಫಲವಾಗಿದೆ. ಇದ್ದಲ್ಲದೆ ರಾಜ್ಯದಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಸಿದ್ದರಾಮಯ್ಯರವರ ಮುಖ್ಯಮಂತ್ರಿಗಳಾಗಿ ಉತ್ತಮವಾದ ಕಾರ್ಯವನ್ನು ಮಾಡಿದ್ದಾರೆ ಪಂಚ ಗ್ಯಾರೆಂಟಿಗಳನ್ನು ಜಾರಿ ಮಾಡುವುದರ ಮೂಲಕ ಜನತೆಗೆ ನೆರವಾಗಿದ್ದಾರೆ. ಈ ಚುನಾವಣೆಯ ಫಲಿತಾಂಶ ಮಂದಿನ  ಚುನಾವಣೆಯ ದಿಕ್ಸೂಚಿಯಾಗಲಿದೆ, ಮತದಾ ರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಇದರಲ್ಲಿ ಕಾಣುತ್ತದೆ ಎಂದ ಅವರು ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಕ್ಕೆ ಮತದಾರರಿಗೆ ಕೃತಘ್ನತೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಓಬಿಸಿ ಅಧ್ಯಕ್ಷ ಎನ್.ಡಿ. ಕುಮಾರ್, ಮುದಾಸಿರ್, ಚೋಟು, ಖಾಸಿಂಆಲಿ, ಚಿತ್ರದುರ್ಗ ಜಿಲಲಾ ಆಶ್ರಯ ಕಮಿಟಿ ಸದಸ್ಯರಾದ ಶ್ರೀಮತಿ ಮುನೀರಾ ಮಕಾನಾದಾರ್, ಸಾಧಿಕ್ ಸೇರಿದಂತೆ ಇತರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎರಡು ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಕ್ಕೆ ಸಿಹಿಯನ್ನು ಹಂಚಿ ಪಟಾಕಿಯನ್ನು ಸಿಡಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...